ಬಳ್ಳಾರಿ:ಕರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್​ಡೌನ್​ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಬಿಟ್ಟು ಸ್ವಗ್ರಾಮಕ್ಕೆ ಹೊರಟಿದ್ದ ತಂದೆ-ಮಗ ಸೇರಿ ನಾಲ್ವರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ವಾಣಿಜ್ಯ ತೆರಿಗೆ ಇಲಾಖೆಯ ನಿರೀಕ್ಷಕ ಬಸವರಾಜ ಭೀಮರಾವ ಬೆಳ್ಳೂರು(52), ಎಂಬಿಬಿಎಸ್ ವಿದ್ಯಾರ್ಥಿ ಭೀಮರಾವ ಬೆಳ್ಳೂರು(30), ಖಾಸಗಿ ಕಂಪನಿ ಉದ್ಯೋಗಿ, ಬಿಇ ಪದವೀಧರ ಸುನೀಲ ಶಿವರಾಜ ಪಾಟೀಲ‌(30) ಮತ್ತು ಕಾರು ಚಾಲಕ ರೇವಣಸಿದ್ದಪ್ಪ ಬಸವರಾಜ ಕೊರಡಂಪಳ್ಳಿ(30) ಮೃತ ದುರ್ದೈವಿಗಳು. ಮೃತರೆಲ್ಲರೂ ಚಿಂಚೋಳಿ ತಾಲೂಕಿನ ಚಿಮ್ಮಾದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದ ಮೂಲದವರು. ಇವರು ಬೆಂಗಳೂರಿನಲ್ಲಿ ವಾಸವಿದ್ದರು.ಇದನ್ನೂ ಓದಿರಿಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಯುವಕರಿಬ್ಬರ ದುರ್ಮರಣ
ಲಾಕ್‌ಡೌನ್ ಹಿನ್ನೆಲೆ ಸ್ವಗ್ರಾಮಕ್ಕೆ ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಸಿರಗುಪ್ಪ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಮೋಕ್ಷಕ್ಕಾಗಿ ಸಹೋದರಿಯರಿಬ್ಬರ ಬಲಿ ಕೊಟ್ಟ ಊರಲ್ಲೇ ಮತ್ತೊಂದು ದುರಂತ: ರಾತ್ರೋರಾತ್ರಿ ತಾಯಿ-ತಂಗಿ-ತಮ್ಮನ ಭೀಕರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 11 =
Remember me
