ತುಮಕೂರು:ಶಿರಾ ತಾಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಇಂದು(ಗುರುವಾರ) ಬೆಳಗಿನಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.
ದುರಂತದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.
‘ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ ಘಟನೆ. ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ದೇವರದಲ್ಲಿ ಪ್ರಾರ್ಥಿಸುವೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು’ ಎಂದು ಪ್ರಧಾನಿ ಅವರು ಟ್ವೀಟ್​ ಮಾಡಿದ್ದಾರೆ.
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು: PM
— PMO India (@PMOIndia)August 25, 2022

ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಈ ಪೈಕಿ ಇಬ್ಬರು ಮಕ್ಕಳು. ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ಕೂಲಿ ಕೆಲಸ ಅರಸಿ ಕ್ರೂಸರ್​ ವಾಹನದಲ್ಲಿ ಗುಳೆ ಹೊರಟ್ಟಿದ್ದರು. ಮಾರ್ಗಮಧ್ಯೆ ಕ್ರೂಸರ್​ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. 14 ಮಂದಿ ಗಾಯಗೊಂಡಿದ್ದು, ಇಬ್ಬರನ್ನು ಬೆಂಗಳೂರಿನ ನಿಮ್ಹಾನ್ಸ್​ಗೆ ರವಾನಿಸಲಾಗಿದೆ.
–H D Kumaraswamy (@h_d_kumaraswamy)25 Aug 2022

–Araga Jnanendra (@aragajnanendra)25 Aug 2022

ಶಿರಾದಲ್ಲಿ ಭೀಕರ ಅಪಘಾತ, 9 ಮಂದಿ ದುರ್ಮರಣ: ಹೊಟ್ಟೆಪಾಡಿಗಾಗಿ ಗುಳೆ ಹೊರಟ್ಟಿದ್ದ ಬಡವರು ದುರಂತ ಅಂತ್ಯ

ಇನ್ಮುಂದೆ ವಾರದಲ್ಲಿ 6 ದಿನ ಸಂಚರಿಸಲಿದೆ ಬೆಂಗಳೂರು-ಮಂಗಳೂರು ಎಕ್ಸ್​ಪ್ರೆಸ್​ ರೈಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
