ದಾವಣಗೆರೆ:ಅಂಗನವಾಡಿ ಮುಗಿಸಿ ಅಜ್ಜಿ ಜತೆ ಮನೆಗೆ ಬರುತ್ತಿದ್ದ ಬಾಲಕಿ ಮೇಲೆ ಲಾರಿ ಹರಿದು 2 ವರ್ಷದ ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ.
ಕುಂದುವಾಡ ಗ್ರಾಮದ ಗಣೇಶ್ ಎಂಬುವವರ ಪುತ್ರಿ ಚರಸ್ವಿ(2) ಮೃತಪಟ್ಟ ದುರ್ದೈವಿ ಬಾಲಕಿ. ಎಂಸ್ಯಾಂಡ್ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಚಕ್ರ ಹರಿದ ರಭಸಕ್ಕೆ ಬಾಲಕಿ ಮೆದುಳು ಚಿದ್ರ..ಚಿದ್ರ ಗೊಂಡು, ಮುಖ ಗುರುತು ಸಿಗದಂತಾಗಿದೆ. ಇನ್ನು KA 17, D5017 ನಂಬರ್​ರಿನ ಟಿಪ್ಪರ್ ಲಾರಿ ಇದಾಗಿದ್ದು, ಚಾಲಕನ ಅಜಾಗರುಕತೆಯಿಂದ ಈ ಅವಘಡ ನಡೆದಿದೆ.
ಲಾರಿ ಚಾಲಕ ಮತ್ತು ಮಾಲೀಕನ ಬಂಧನಕ್ಕೆ ಆಗ್ರಹಿಸಿ ಮತ್ತು ಘಟನೆ ಖಂಡಿಸಿ ರಸ್ತೆ ಬಂದ್ ಮಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ, ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಲಾರಿ ಕ್ಲೀನರ್​​ನನ್ನು ಪೊಲೀಸರು ವಶಕ್ಕೆ ಪಡೆದು ಚಾಲಕನಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
