ಬಾಗಲಕೋಟೆ:ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಪ್ರಿಯಕರನೊಂದಿಗೆ ಸಹಬಾಳ್ವೆ ಜೀವನ  ನಡೆಸುತ್ತಿದ್ದ ಯುವತಿಯೊಬ್ಬಳು ಇಂದು ತನ್ನ ಪ್ರಿಯಕರನ ಮನೆಯಲ್ಲೇ ದುರಂತ ಅಂತ್ಯಕಂಡಿದ್ದಾಳೆ. ಸಿಟ್ಟಿಗೆದ್ದ ಮೃತಳ ಪೋಷಕರು ಮಗಳ ಪ್ರಿಯಕರನ ಮನೆಗೆ ಬೆಂಕಿ ಇಟ್ಟಿದ್ದಾರೆ.
ಇಂತಹ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೆಲೂರಿನಲ್ಲಿ ಸಂಭವಿಸಿದ್ದು, ನೂರಾರು ಜನರ ಕಣ್ಣೆದುರಲ್ಲೇ ಮನೆ ಹೊತ್ತಿ ಉರಿದಿದೆ. ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಯುವತಿ ಬಸಮ್ಮ ಮಾದರ ಮತ್ತು ರಂಜಿತ್ ಕೊಂಚನವರ ಪರಸ್ಪರ ಪ್ರೀತಿಸುತ್ತಿದ್ದರು. ಆದರೂ ಯುವತಿಯ ಕುಟುಂಬಸ್ಥರು ಬೇರೊಬ್ಬನೊಂದಿಗೆ ಮದುವೆ ಮಾಡಿದ್ದರು. ಗಂಡನಿಗೆ ಬಸಮ್ಮಳ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ವಿಚಾರ ಗೊತ್ತಾಗಿ ಜಗಳ ನಡೆದು ಇಬ್ಬರ ವೈವಾಹಿಕ ಜೀವನ ಮುರಿದುಬಿದ್ದಿತ್ತು. ಕೊನೆಗೆ ಪ್ರಿಯಕರ ರಂಜಿತ್​ ಜತೆ ಬಸಮ್ಮ ಸಹಬಾಳ್ವೆ ನಡೆಸುತ್ತಿದ್ದಳು.
ಆದರೆ, ರಂಜಿತ್​ ಮತ್ತು ಬಸಮ್ಮರದ್ದು ಅಂತರ್ಜಾತಿ. ಹಾಗಾಗಿ ರಂಜಿತ್​ ಕುಟುಂಬಸ್ಥರ ಜತೆ ಇರದೆ ಪ್ರತ್ಯೇಕವಾಗಿ ಪ್ರೇಯಸಿ ಜತೆ ವಾಸವಿದ್ದ. ಶುಕ್ರವಾರ ಬೆಳಗ್ಗೆ ಬಸಮ್ಮಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗಳ ಸಾವಿಗೆ ರಂಜಿತ್​ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ರೊಚ್ಚಿಗೆದ್ದ ಕುಟುಂಬಸ್ಥರು ರಂಜಿತ್​ ಮನೆಗೆ ಬೆಂಕಿ ಇಟ್ಟು ಆಕ್ರೋಶ ಹೊರಹಾಕಿದರು.

ಸ್ಥಳಕ್ಕೆ ಬಂದ ಹುನಗುಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲೂರ ಗ್ರಾಮದಲ್ಲಿ ಯುವತಿ ನೇಣುಹಾಕಿಕೊಂಡಿದ್ದ ಮನೆ ಹಾಗೂ ಬೆಂಕಿ ಹಚ್ಚಿದ್ದ ಮನೆಗೆ ಎಸ್ಪಿ ಲೋಕೇಶ್ ಜಗಲಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಗ್ರಾಮದಲ್ಲಿ ಪೊಲೀಸ್​ ಬಂದೋಬಸ್ತ್ ಏರ್ಪಡಿಸಲಾಗಿದೆ.
ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

ಸಲಿಂಗಕಾಮಕ್ಕೆ ಒಪ್ಪದ ಸರ್ಕಾರಿ ಶಾಲೆ ಶಿಕ್ಷಕನ ಬರ್ಬರ ಹತ್ಯೆ! ಬೆಚ್ಚಿಬೀಳಿಸುತ್ತೆ ಆ ರಾತ್ರಿಯ ಕೃತ್ಯ

ಕಿರುಕುಳ ಸಹಿಸಲಾಗದೆ ತವರಿಗೆ ಹೋಗಿದ್ದ ಪತ್ನಿಗೆ ಫೋನ್​ನಲ್ಲೇ ಹಿಂಸಿಸುತ್ತಿದ್ದ ಭೂಪ! ನಡೆದೇ ಹೋಯ್ತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 17 =
Remember me
