ಚಿಕ್ಕಬಳ್ಳಾಪುರ: ಪ್ರೀತಿಸಿ ವಿವಾಹವಾಗಿದ್ದ 19 ವರ್ಷದ ಯುವತಿ ಮನೆಯಲ್ಲೇ ದುರಂತ ಅಂತ್ಯಕಂಡಿದ್ದು, ಆಕೆಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಈಕೆಯ ಬಲಕಿವಿಯನ್ನು ಕಿತ್ತು ಹಾಕಿದ್ದು, ಕಿವಿ ಮಾಯವಾಗಿದೆ. ಆದರೆ ಗಂಡನ ಹೇಳಿಕೆ ಅನುಮಾನ ಮೂಡಿಸಿದೆ.
ಚಿಕ್ಕಬಳ್ಳಾಪುರ ನಗರದ 7ನೇ ವಾರ್ಡಿನಲ್ಲಿ ಈ ಘಟನೆ ಸಂಭವಿಸಿದೆ. ಅನುಷಾ ಮೃತ ದುರ್ದೈವಿ. ಓದುವ ವಯಸ್ಸಲ್ಲೇ ಅಭಿಲಾಷ್​ ಎಂಬಾತನ್ನು ಪ್ರೀತಿಸಿ ಅನುಷಾ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಳು. ಗಂಡ-ಹೆಂಡತಿ ಇಬ್ಬರೂ 7ನೇ ವಾರ್ಡಿನ ಮನೆಯಲ್ಲಿ ವಾಸವಿದ್ದರು. ಶನಿವಾರ ಬೆಳಗ್ಗೆ ಮನೆಯಲ್ಲಿ ಅನುಷಾಳ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಆಕೆಯ ಒಂದು ಕಿವಿಯನ್ನು ಕಿತ್ತು ಹಾಕಲಾಗಿದೆ. ಆದರೆ ಕಿತ್ತ ಕಿವಿಯ ಭಾಗ ಅಲ್ಲಿಲ್ಲ. ಬಹಳಷ್ಟು ಅನುಮಾನ ಮೂಡಿಸುತ್ತಿದೆ ಕಿವಿ ಮಿಸ್ಸಿಂಗ್‌!
ನನ್ನ ಪತ್ನಿಗೆ ನೇಣು‌ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಅಭಿಲಾಷ್​ ಪೊಲೀಸರ ಬಳಿ ಹೇಳಿದ್ದಾನೆ. ಆದರೆ, ಅನುಷಾಳನ್ನು ಈಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
PSI ಹುದ್ದೆ ನೇಮಕಾತಿಯಿಂದ ವಂಚಿತರಾದ ಅಭ್ಯರ್ಥಿಗಳಿಂದ HDK ಕಾರಿಗೆ ಮುತ್ತಿಗೆ ಹಾಕಲು ಯತ್ನ

ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two + 11 =
Remember me
