ಬೆಂಗಳೂರು:ಎರಡು ಮಕ್ಕಳ ತಾಯಿ, ವಿಚ್ಛೇದಿತ ಮಹಿಳೆಯೊಬ್ಬರಿಗೆ ಬಾಳು ಕೊಡ್ತೀನೆಂದು ಪುಸಲಾಯಿಸಿದ ಸಹದ್ಯೋಗಿ, ಮದುವೆ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಮಾಡಬಾರದ್ದು ಮಾಡಿದ್ದಾನೆ. ದಿಕ್ಕು ತೋಚದ ಮಹಿಳೆ, ನ್ಯಾಯಕ್ಕಾಗಿ ಇಂದಿರಾನಗರ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.
ಇಂದಿರಾನಗರದ ನಿವಾಸಿ 28 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸಾಕಿಬ್​ ಅಹಮ್ಮದ್​ ಖುರೇಶಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರ ಮಹಿಳೆ ಕೌಟುಂಬಿಕ ಕಲಹದಿಂದ ಮೊದಲನೇ ಪತಿಗೆ ವಿಚ್ಛೇದನ ನೀಡಿ ಇಬ್ಬರು ಮಕ್ಕಳ ಜತೆಗೆ ಒಂಟಿಯಾಗಿ ವಾಸಿಸುತ್ತಿದ್ದಳು. ಜೀವನ ನಿರ್ವಹಣೆಗೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಖುರೇಶಿ ಈಕೆಯೊಂದಿಗೆ ಸಲುಗೆ ಬೆಳೆಸಿ ಪ್ರೀತಿಸುವ ನಾಟಕವಾಡಿ ವಿವಾಹವಾಗುವುದಾಗಿ ನಂಬಿಸಿದ್ದ. ನಂತರ ಸಂತ್ರಸ್ತೆಯನ್ನು ಪುಸಲಾಯಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ.
2020ರ ಡಿ.10ರಂದು ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಆರೋಪಿಯನ್ನು ವಿವಾಹವಾಗಲು ಮಹಿಳೆ ಸಿದ್ಧತೆ ನಡೆಸುತ್ತಿದ್ದಾಗ ಕೊನೇ ಕ್ಷಣದಲ್ಲಿ ಆರೋಪಿ ಸಬೂಬು ಹೇಳಿ ವಿವಾಹ ದಿನಾಂಕ ಮುಂದೂಡಿದ್ದ. ನಂತರ ಮತ್ತೆ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಹೊಂದಿದ್ದ. ಮಹಿಳೆ ಈ ವಿಚಾರವನ್ನು ಪಾಲಕರ ಗಮನಕ್ಕೆ ತಂದಿದ್ದಳು. ಅವರು ಆತನಿಗೆ ಕೊಟ್ಟು ಮದುವೆ ಮಾಡಲು ಒಪ್ಪಿಗೆ ಸೂಚಿಸಿದ್ದರು. ಸಂತ್ರಸ್ತೆಯ ಪಾಲಕರು ಕುರೇಶಿ ಜತೆಗೆ ಚರ್ಚಿಸಿ ಫೆ.24ರಂದು ವಿವಾಹ ಸಮಾರಂಭದ ದಿನಾಂಕ ನಿಗದಿಪಡಿಸಿದ್ದರು. ಈ ನಡುವೆ ವಿವಾಹದ ಸಿದ್ಧತೆಯಲ್ಲಿದ್ದ ಸಂತ್ರಸ್ತೆಯನ್ನು ಭೇಟಿಯಾದ ಕುರೇಶಿ, ನಾನು ನಿನ್ನನ್ನು ವಿವಾಹವಾಗುವುದಿಲ್ಲ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಂಚಿಸಿದ್ದಾನೆ. ವಂಚನೆಗೊಳಗಾದ ಸಂತ್ರಸ್ತೆ ನ್ಯಾಯಕ್ಕಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.
ಅಪ್ರಾಪ್ತ ನಾದಿನಿಯನ್ನ ಲೈಂಗಿಕವಾಗಿ ಬಳಸಿ ವಿಕೃತಿ ಮೆರೆದ ಬಾವ! ಪ್ರಸವಪೂರ್ವ ಹೆರಿಗೆಯಾದ ಮಗು ಸಾವು

ಡೇಟಿಂಗ್​ ನೆಪದಲ್ಲಿ ಅವಿವಾಹಿತೆಯರ ಮನೆಗೆ ತೆರಳುತ್ತಿದ್ದ ಎರಡು ಮಕ್ಕಳ ತಂದೆ, ಬಟ್ಟೆ ಬಿಚ್ಚುತ್ತಿದ್ದಂತೆ ವರಸೆ ಬದಲಿಸುತ್ತಿದ್ದ…

ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
