ಬೆಂಗಳೂರು:‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಮಹಾ ದುರಂತ ಸಂಭವಿಸಿದ್ದು, ಫೈಟ್​ ಅಸಿಸ್ಟೆಂಟರ್​ ವಿವೇಕ್​(35) ಮೃತಪಟ್ಟಿದ್ದಾರೆ.
ನಟ ಅಜಯ್ ರಾವ್ ಮತ್ತು ನಟಿ ರಚಿತ ರಾಮ್ ನಟನೆಯ ‘ಲವ್​ ಯೂ ರಚ್ಚು’ ಕನ್ನಡ ಸಿನಿಮಾ ಶೂಟಿಂಗ್ ಸೋಮವಾರ ರಾಮನಗರದ ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ನಡೆಯುತ್ತಿತ್ತು. ಈ ವೇಳೆ ವಿದ್ಯುತ್​ ಅವಘಡ ಸಂಭವಿಸಿ ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಈ ಪೈಕಿ ಫೈಟರ್​ ತಮಿಳುನಾಡು ಮೂಲದ ​ವಿವೇಕ್ ಮೃತಪಟ್ಟಿದ್ದು, ಮತ್ತೊಬ್ಬನಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಚಿತ್ರೀಕರಣ ವೇಳೆ ಮೆಟಲ್​ ರೋಪ್​ ಬಳಸಿದ್ದೇ ಅವಘಡಕ್ಕೆ ಕಾರಣ. ಹೈ ಟೆನ್ಶನ್​ ತಂತಿಗೆ ತಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಅವಘಡ ಸಂಭವಿಸುತ್ತದ್ದಂತೆ ಚಿತ್ರೀಕರಣ ನಿಲ್ಲಿಸಲಾಗಿದೆ. ರಾಮನಗರ ಪೊಲೀಸರು ಸ್ಟಂಟ್​​ ಮಾಸ್ಟರ್​ ವಿನೋದ್​  ಮತ್ತು ನಿರ್ದೇಶಕ ಶಂಕರ್​ ರಾಜ್​ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ನಾನಿರಲಿಲ್ಲ, ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಸ್ಥಳಕ್ಕೆ ಭೇಟಿ ನೀಡುವೆ ಎಂದು ನಿರ್ಮಾಪಕ ಗುರುದೇಶಪಾಂಡೆ​ ಹೇಳಿದ್ದಾರೆ.
ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − twelve =
Remember me
