ರಾಮನಗರ:ಮಗಳು ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆ ಆಗಿದ್ದಕ್ಕೆ ಮನನೊಂದ ತಂದೆ-ತಾಯಿ ಇಬ್ಬರೂ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೆಂಕ್ಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಎಚ್.ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ (50) ಮತ್ತು ಶೈಲಜಾ(42) ಮೃತ ದಂಪತಿ. ಇವರ ಪುತ್ರಿ ಶಿಲ್ಪಾ ಮತ್ತು ಇದೇ ಗ್ರಾಮದ ಪುನೀತ್ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರೂ ಒಂದೇ ಸಮುದಾಯದವರು. ಭಾನುವಾರ(ಮೇ 30) ಮನೆ ಬಿಟ್ಟು ಓಡಿಹೋಗಿದ್ದ ) ಪ್ರೇಮಿಗಳಿಬ್ಬರೂ ಸೋಮವಾರ ಮದುವೆ ಮಾಡಿಕೊಂಡಿದ್ದರು.ಇದನ್ನೂ ಓದಿರಿಆಸ್ಪತ್ರೆಯಲ್ಲಿ ಲೈಂಗಿಕ ಕಿರುಕುಳ, ಕೈ ಸನ್ನೆಯಲ್ಲೇ ಮಗನಿಗೆ ಹೇಳಿ ಕಣ್ಣೀರಿಟ್ಟ ಸೋಂಕಿತೆ: ವಾರ್ಡ್​ ಬಾಯ್ ಅರೆಸ್ಟ್
ಮಗಳು ಓಡಿಹೋಗಿ ಮದುವೆ ಮಾಡಿಕೊಂಡ ವಿಷಯ ಕೇಳಿ ತೀವ್ರವಾಗಿ ರಮೇಶ್​ ಮತ್ತು ಶೈಲಜಾ ನೊಂದಿದ್ದರು. ಹಲವು ಭಾರಿ ಇದೇ ವಿಚಾರಕ್ಕೆ ಮನೆಯಲ್ಲಿಯೂ ಸಣ್ಣ ಪುಟ್ಟ ಗಲಾಟೆ ನಡೆದಿತ್ತು. ಮನಸು ಬದಲಿಸಿಕೊಂಡಿದ್ದೇನೆ ಎಂದು ಹೇಳಿದ್ದ ಮಗಳು ಏಕಾಏಕಿ ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣಕ್ಕೆ ಮನನೊಂದು ದಂಪತಿ ತಮ್ಮ ತೋಟದಲ್ಲಿ ಮಾವಿನ ಮರಕ್ಕೆ ನೇಣುಬಿಗಿದುಕೊಂಡು ಸತ್ತಿದ್ದಾರೆ.
ಗ್ರಾಮದಲ್ಲಿ ಒಳ್ಳೆಯ ಹೆಸರು ಗಳಿಸಿದ್ದ ರಮೇಶ್ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದರು. ಹಲವು ಭಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಕಾರಣಕ್ಕಾಗಿ ಗ್ರಾಮದಲ್ಲಿ ಸಣ್ಣ ಪುಟ್ಟ ಗಲಾಟೆ ನಡೆದ ಸಂದರ್ಭದಲ್ಲಿ ರಮೇಶ್ ನ್ಯಾಯ ಪಂಚಾಯ್ತಿ ಮಾಡಿ ನ್ಯಾಯ ಒದಗಿಸಿಕೊಡುತ್ತಿದ್ದರು. ಮಗಳು ತಪ್ಪು ಮಾಡಿದ್ದಾಳೆ, ನನ್ನ ಮರ್ಯಾದೆಯೇ ಹೋಯಿತು, ಇನ್ನು ಮುಂದೆ ಯಾರಿಗೆ ನ್ಯಾಯ ಹೇಳಲಿ? ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಗ್ರಾಮದಲ್ಲಿ ಬಲವಾಗಿ ಕೇಳಿ ಬರುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಗ್ರಾಮಸ್ಥರು ಯಾರಿಗೂ ಹೇಳದೆ ಅಂತ್ಯಕ್ರಿಯೆ ಮುಗಿಸುವ ಪ್ಲಾನ್ ಮಾಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಎಂ.ಕೆ.ದೊಡ್ಡಿ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದ್ದಾರೆ. ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ!

ಹಿಂದು ಯುವತಿಯನ್ನ ಮದ್ವೆಯಾದ 7 ಮಕ್ಕಳ ತಂದೆ! ಖಾಸಗಿ ದೃಶ್ಯ ಸೆರೆಹಿಡಿದು ಇಸ್ಲಾಂಗೆ ಮತಾಂತರ

ಮಹಾವಂಚಕಿಗೆ ಸಾಥ್ ಕೊಟ್ಟ ಸ್ಯಾಂಡಲ್​ವುಡ್​ ನಟ? ಸಾವಿರಾರು ಕೋಟಿ ರೂ. ರಹಸ್ಯ ಬಯಲು

ಆಸ್ಪತ್ರೆಯಲ್ಲಿ ಲೈಂಗಿಕ ಕಿರುಕುಳ, ಕೈ ಸನ್ನೆಯಲ್ಲೇ ಮಗನಿಗೆ ಹೇಳಿ ಕಣ್ಣೀರಿಟ್ಟ ಸೋಂಕಿತೆ: ವಾರ್ಡ್​ ಬಾಯ್ ಅರೆಸ್ಟ್

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 8 =
Remember me
