ಬೆಂಗಳೂರು:ತನ್ನದೇ ಸರ್ಕಾರದ ವಿರುದ್ಧ ಸಚಿವ ಮಾಧುಸ್ವಾಮಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್​ ಆಗಿದ್ದು, ರಾಜ್ಯ ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ.
ರೈತರ ಸಮಸ್ಯೆ ಹೇಳಿಕೊಂಡು ಕರೆ ಮಾಡಿದ ಭಾಸ್ಕರ್​ ಎಂಬುವರಿಗೆ ‘ರಾಜ್ಯದಲ್ಲಿ ಸರ್ಕಾರ ನಡೆಯುತ್ತಿಲ್ಲ. ಹೇಗೋ ಮ್ಯಾನೇಜ್​ ಮಾಡ್ತಿದ್ದೀವಿ ಅಷ್ಟೆ. ಚುನಾವಣೆ ಬರೋವರೆಗೂ ತಳ್ತಾ ಇದ್ದೀವಿ’ ಎಂದು ಮಾಧುಸ್ವಾಮಿ ಅಸಹಾಯಕತೆ ತೋರಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಈ ಆಡಿಯೋ ಅಸಲಿಯೋ-ನಕಲಿಯೋ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.ಆಡಿಯೋದಲ್ಲಿ ಏನಿದೆ?ಭಾಸ್ಕರ್​:ನಮಸ್ತೆ ಸರ್​, ನಾನು ಚನ್ನಪಟ್ಟಣದಿಂದ ಸಮಾಜ ಸೇವಕ ಭಾಸ್ಕರ್​ ಅಂತ. ವಿಎಸ್​ಎಸ್​ಎನ್​ ಬ್ಯಾಂಕ್​ನಲ್ಲಿ 50 ಸಾವಿರ ರೂಪಾಯಿ ಸಾಲ ಪಡೆದಿದ್ದಾರೆ ರೈತರು. ಆ ಹಣ ಕಟ್ಟಬೇಕಾದರೆ ರಿನೀವಲ್​ಗೆ ಅಂತ 1,300 ರೂಪಾಯಿಯನ್ನ ಬ್ಯಾಂಕ್​ ಸಿಬ್ಬಂದಿಗಳು ತಗೊಂಡು ಅವರೇ ಬಡ್ಡಿಗೆ ಅಂತ ಹಣ ಇಟ್ಕೊತ್ತಿದ್ದಾರೆ.ಮಾಧುಸ್ವಾಮಿಯದ್ದು ಎನ್ನಲಾದ ಧ್ವನಿ:ಏನಪ್ಪ ಮಾಡ್ಲಿ… ಇದೆಲ್ಲ ನನಗೆ ಗೊತ್ತು, ಬಡ್ಡಿ ಹೊಡ್ಕೊಂಡು ತಿಂತಾರೆ ಅಂತ ಸನ್ಮಾನ್ಯ ಸೋಮಶೇಖರ್​ ಅವರ ಗಮನಕ್ಕೂ ತಂದಿದ್ದೇನೆ. ಅವರೇನು ಕ್ರಮ ಜರುಗಿಸ್ತಾ ಇಲ್ವಲ್ಲಾ… ಏನ್​ ಮಾಡೋದು?ಭಾಸ್ಕರ್​:ರೈತರನ್ನ ಬ್ಯಾಂಕ್​ನವರು ಮಂಗನಂತೆ ಮಾಡಿಬಿಟ್ಟಿದ್ದಾರೆ ನೋಡಿ ಸರ್ಮಾಧುಸ್ವಾಮಿಯದ್ದು ಎನ್ನಲಾದ ಧ್ವನಿ:ನಾನೇ ಕಟ್ಟಿದ್ದೀನಿ ಮಾರಾಯಾ, ರೈತರಲ್ಲ ನನ್ನ ಅತ್ರನೂ ತಗೊಂಡವ್ರೇ…ಭಾಸ್ಕರ್​:ನೋಡಿ ಸರ್​ ಇದೆಲ್ಲಾ ನೋಡೋಕೆ ಸರಿ ಕಾಣ್ಸಲ್ಲ…ಮಾಧುಸ್ವಾಮಿಯದ್ದು ಎನ್ನಲಾದ ಧ್ವನಿ:ಸರ್ಕಾರ ನಡೀತಾ ಇಲ್ಲ ಇಲ್ಲಿ, ಮ್ಯಾನೇಜ್​ಮೆಂಟ್​​ ಮಾಡ್ತಿದ್ದೀವಿ ಅಷ್ಟೆ. ತಳ್ಳಿದ್ರೆ ಸಾಕು ಇನ್ನು 8 ತಿಂಗಳು ಅಂತ ತಳ್ತಾ ಇದ್ದೀವಿ…
ನಾಗರಹಾವಿನ ಹೆಡೆಯಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿದ ತಾಯಿ! ಮಂಡ್ಯದಲ್ಲಿ ಎದೆ ಝಲ್​ ಅನ್ನಿಸೋ ಘಟನೆ, ವಿಡಿಯೋ ವೈರಲ್​

ಧರ್ಮಸ್ಥಳದಲ್ಲಿ ರೂಂ ಸಿಗಲಿಲ್ಲವೆಂದು ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಭಿನ್ನಕೋಮಿನ ಜೋಡಿಗೆ ಮಾರ್ಗದಲ್ಲೇ ಕಾದಿತ್ತು ಶಾಕ್​

ಹೊಳೆನರಸೀಪುರ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕುಯ್ದು ಕೊಂದ ಗಂಡ: ಎರಡೂ ಹೆಣ್ಣು ಮಕ್ಕಳಾಗಿದ್ದಕ್ಕೆ ಕ್ರೌರ್ಯ ಮೆರೆದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
