ಕುಣಿಗಲ್:ಎರಡು ಚಿರತೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಗಂಡು ಚಿರತೆ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಹುತ್ರಿದುರ್ಗ ಹೋಬಳಿಯ ಶಂಕರೋಡೆಯರಪಾಳ್ಯದಲ್ಲಿ ಸಂಭವಿಸಿದೆ.
ಶಂಕರೋಡೆಯರಪಾಳ್ಯ ಗ್ರಾಮದ ಜಯರಾಮಯ್ಯ ಎಂಬುರವ ತೋಟದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಎಂದಿನಂತೆ ಜಯರಾಮಯ್ಯರ ಪತ್ನಿ ಗಂಗಮ್ಮ ಅವರು ಭಾನುವಾರ ಬೆಳಗ್ಗೆ ಜಮೀನಿಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಹುಲಿಯೂರುದುರ್ಗ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಚಿರತೆ ಸತ್ತಿದೆ ಎಂದು ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಮತ್ತು ಅಕ್ಕಪಕ್ಕದ ಊರಿನವರು ನೋಡಲು ಜಮೀನಿಗೆ ಭೇಟಿ ನೀಡಿದ್ದರು. ಈ ವ್ಯಾಪ್ತಿಯಲ್ಲಿ ಚಿರತೆಗಳಿದ್ದು, ನಾಯಿಗಳು ಮತ್ತು ಜಾನುವಾರುಗಳ ಮೇಲೆ ದಾಳಿ ಮಾಡುವ ಪ್ರಕರಣ ಪದೇಪದೆ ಸಂಭವಿಸುತ್ತಲೇ ಇದೆ. ಚಿರತೆ ಭಯದಲ್ಲೇ ಕಾಡಂಚಿನ ಗ್ರಾಮಗಳ ಜನರು ದಿನದೂಡುತ್ತಿದ್ದಾರೆ. ಇದೀಗ ಚಿರತೆಗಳ ಕಾದಾಟ ನಡೆದು ಚಿರತೆಯೊಂದು ಸತ್ತಿದೆ.
ಬೈಕ್​ ಸ್ಕಿಡ್​ ಆಗಿ ವಿದ್ಯಾರ್ಥಿಗಳಿಬ್ಬರ ಸಾವು: ರಜೆ ಹಿನ್ನೆಲೆ ಮುರುಡೇಶ್ವರಕ್ಕೆ ತೆರಳುವಾಗ ಅವಘಡ

ಮಲ್ಪೆ ಕಡಲ ತೀರದಲ್ಲಿ ಬೀಳುತ್ತಿದೆ ಚಿನ್ನ! ಕಸದ ರಾಶಿಯಲ್ಲಿ ಬಂಗಾರದ ಬೇಟೆಗೆ ಮುಗಿಬಿದ್ದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + four =
Remember me
