ಹನೂರು:ಮಲೆ‌‌ಮಹದೇಶ್ವರ ಬೆಟ್ಟದ‌ ದೇವಸ್ಥಾನದ ಅರ್ಚಕರೊಬ್ಬರು ಮಂಗಳವಾರ ನಸುಕಿನಲ್ಲಿ ದೇವರಿಗೆ ಪೂಜೆ ನೆರವೇರಿಸಿ ದೇವರ ಉತ್ಸವದಲ್ಲಿ ಪಾಲ್ಗೊಳ್ಳುವ ವೇಳೆ ಕುಸಿದು ಬಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗದಲ್ಲೇ ಮೃತಪಟ್ಟಿದ್ದಾರೆ.
ಅರ್ಚಕ ನಾಗಣ್ಣ(45) ಮೃತರು. ದೊಡ್ಡಾಣೆ ಗ್ರಾಮದ ನಿವಾಸಿಯಾದ ನಾಗಣ್ಣ, ಇತ್ತೀಚಿಗೆ ಮಾರ್ಟಳ್ಳಿಯ ಕಡಬೂರಿನಲ್ಲಿ ವಾಸವಿದ್ದರು. ಬೇಡಗಂಪಣ ಸಮುದಾಯದ ಉಪ ಅರ್ಚಕರಾಗಿದ್ದ ನಾಗಣ್ಣ ಅವರಿಗೆ ಈ ತಿಂಗಳು ಮಲೆ ಮಹದೇಶ್ವರ ದೇಗುಲದಲ್ಲಿ ಸರದಿ ಪೂಜೆ ಮಾಡಲು ಅವಕಾಶ ಸಿಕ್ಕಿತ್ತು. ಮಂಗಳವಾರ ಮುಂಜಾನೆ ದೇವಸ್ಥಾನಕ್ಕೆ ಬಂದು ಬೆಳಗಿನ ಪೂಜಾ ಕಾರ್ಯ ಮುಗಿಸಿದ್ದರು. ದೇಗುಲದ ಹೊರಗೆ ಉತ್ಸವ ಬರುವ ಸ್ಥಳದಲ್ಲಿ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳಲು ನಡೆದು ಹೋಗುವಾಗ ಕುಸಿದು ಬಿದ್ದಿದ್ದಾರೆ.
ಜತೆಗಿದ್ದ ಅರ್ಚಕರು ತಕ್ಷಣ ನಾಗಣ್ಣ ಅವರನ್ನು ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹನೂರಿಗೆ ರವಾನಿಸುವಾಗ ತಾಳಬೆಟ್ಟದ ಬಳಿ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ‌ಇದ್ದಾರೆ.
ಬೈಕ್​ ಸ್ಕಿಡ್​ ಆಗಿ ವಿದ್ಯಾರ್ಥಿಗಳಿಬ್ಬರ ಸಾವು: ರಜೆ ಹಿನ್ನೆಲೆ ಮುರುಡೇಶ್ವರಕ್ಕೆ ತೆರಳುವಾಗ ಅವಘಡ

ಮಾಡದ ತಪ್ಪಿಗೆ ಯುವಕ ಬಲಿ, ಪಿಎಸ್​ಐ ಅಮಾನತು: ಮೃತದೇಹದ ಬಳಿ ಸಿಕ್ಕ ಕವರ್​ನಲ್ಲಿದೆ ಮಹತ್ವದ ಸಾಕ್ಷ್ಯ

10 ವರ್ಷದ ಬಳಿಕ ಬಯಲಾಯ್ತು ಮರ್ಯಾದಾ ಹತ್ಯೆ ಪ್ರಕರಣ: ಬಾರ್​ನಲ್ಲಿ ಕುಳಿತು ಕುಡಿದ ನಶೆಯಲ್ಲಿ ಸತ್ಯ ಕಕ್ಕಿದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + twelve =
Remember me
