ಬೆಂಗಳೂರು:ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ ಅವರನ್ನು ಜೆಡಿಎಸ್​ ಪಕ್ಷದಿಂದ ಉಚ್ಛಾಟಿಸುವುದಾಗಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್​ ಮಹಿಳಾ ಕಾರ್ಯಕರ್ತೆಯೊಬ್ಬರ ಜತೆ ಮೊಬೈಲ್​ನಲ್ಲಿ ಶಿವರಾಮೇಗೌಡ ಮಾತನಾಡುತ್ತಾ, ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ 30 ಕೋಟಿ ರೂ. ಖರ್ಚು ಮಾಡಿದ್ದೆ. ಎಂಎಲ್ಸಿ ಚುನಾವಣೆಯಲ್ಲಿ 27 ಕೋಟಿ ರೂ. ಖರ್ಚು ಮಾಡಿದ್ದೆ. ಮುಂಬರುವ ವಿಧಾನಸಭೆ ಚುನಾವಣೆಗೆ 30 ಕೋಟಿ ರೂ. ಖರ್ಚು ಮಾಡಲು ಸಿದ್ಧನಿದ್ದೇನೆ. ನೀವು ನನಗೇ ಬೆಂಬಲ ನೀಡಬೇಕು ಎಂದಿದ್ದ ಆಡಿಯೋ ವೈರಲ್​ ಆಗಿತ್ತು. ಈ ಕುರಿತು ಸೋಮವಾರ ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್​ಡಿಕೆ, ಇವರೊಬ್ಬರೇ ಹಣ ಕಂಡಿಲ್ಲ. ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿ ದಿ.ಮಾದೇಗೌಡರ ವಿಚಾರದಲ್ಲೂ ಶಿವರಾಮೇಗೌಡ ನಾಲಗೆ ಹರಿಯಬಿಟ್ಟಿದ್ದಾರೆ. ಇಂತಹವರು ಪಕ್ಷದಲ್ಲಿದ್ದರೆ ಶೋಭೆ ತರುವುದಿಲ್ಲ. ನೋಟಿಸ್​ ಕೊಟ್ಟು ಪಕ್ಷದಿಂದ ಹೊರ ಹಾಕುವಂತೆ ಜೆಡಿಎಸ್​ ಅಧ್ಯಕ್ಷರಿಗೆ ಸೂಚನೆ ಕೊಡುವೆ ಎಂದರು.
ಪಾರ್ಲಿಮೆಂಟ್ ಚುನಾವಣೆಯಲ್ಲಿ 30 ಕೋಟಿ ಮಾಡಿದ್ದಾಗಿ ಹೇಳಿದ್ದಾರೆ. ಅದ್ಯಾರಿಗೆ ಹಣ ಕೊಟ್ಟಿದ್ದಾರೋ ಗೊತ್ತಿಲ್ಲ. ಸಂಬಂಧ ಇಲ್ಲದೇ ಇರುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿ ದಿ.ಮಾದೇಗೌಡರ ವಿಚಾರದಲ್ಲಿ ಮಾತನಾಡಿದ್ದಾರೆ. ನಮಗೆ ಅವರಿಗೆ ರಾಜಕೀಯ ಬೇರೆ. ಅವರು ಈಗ ಇಲ್ಲ. ಇಂತಹ ಸಂದರ್ಭದಲ್ಲಿ ಆ ರೀತಿ ಪದಬಳಕೆ ಮಾಡಿರೋದು ಸರಿಯಲ್ಲ. ಮಾದೇಗೌಡರ ಬಗ್ಗೆ ಶಿವರಾಮೇಗೌಡ ಮಾತನಾಡಿದ್ದು ಸರಿಯಲ್ಲ. ಎಲ್ಲದಕ್ಕೂ ಒಂದು ಇತಿ-ಮಿತಿ ಇದೆ. ಇಲ್ಲಿಯವರೆಗ ತಿದ್ದಿಕೊಳ್ಳುತ್ತಾರೆ ಅಂದುಕೊಂಡು ಸುಮ್ಮನಾಗಿದ್ದೆವು. ಆದರೆ ಅದು ಆಗಲಿಲ್ಲ ಎಂದು ಎಚ್​ಡಿಕೆ ಅಸಮಾಧಾನ ಹೊರಹಾಕಿದರು.
ಮಂಡ್ಯದಲ್ಲಿ ಸಂಚಲನ ಮೂಡಿಸಿದ ಆಡಿಯೋ! ಜೆಡಿಎಸ್​ ಮಹಿಳಾ ಕಾರ್ಯಕರ್ತೆ ಜತೆ ಶಿವರಾಮೇಗೌಡ ಮಾತನಾಡಿದ್ದೇನು?

ಮೆಜೆಸ್ಟಿಕ್ ರೈಲು ನಿಲ್ದಾಣದೊಳಗೇ ತಲೆ ಎತ್ತಿದ ಮಸೀದಿ! ​ಕೂಲಿ ಕಾರ್ಮಿಕರ ರೆಸ್ಟ್ ರೂಂನಲ್ಲಿ ಪ್ರಾರ್ಥನೆ… ವಿಡಿಯೋ ವೈರಲ್

ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಲ್ಲ… ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಸ್ವಾಮಿ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
