ಮಂಡ್ಯ:ಜೀವನದಿ ಕಾವೇರಿ ನದಿ ಪ್ರವಾಹದಲ್ಲಿ ಸ್ನಾನ ಮಾಡಲು ಹೋಗಿ ಕೊಚ್ಚಿಕೊಂಡು ಹೋಗಿದ್ದ ಬೆಂಗಳೂರು ಯಲಹಂಕ ನಿವಾಸಿ ಅಶೋಕ್(26) ಆರು ದಿನದ ಬಳಿಕ ಶವವಾಗಿ ಪತ್ತೆಯಾಗಿದ್ದಾನೆ.
ಜು.13ರಂದು ಶ್ರೀರಂಗಪಟ್ಟಣದ ಗಂಜಾಂ ಸಮೀಪದ ಸಂಗಮ ಬಳಿ ಸ್ನಾನ ಮಾಡಲು ಇಳಿದಾಗ ರಭಸದಿಂದ ಹರಿಯುತ್ತಿದ್ದ ನೀರಿನಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದ. ಅಗ್ನಿಶಾಮಕ ಸಿಬ್ಬಂದಿ, ತಾಲೂಕು ಆಡಳಿತ ಹಾಗೂ ಎನ್‌ಡಿಆರ್‌ಎಫ್ ತಂಡ ಆರು ದಿನದಿಂದ ಯುವಕನ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು. ಈ ನಡುವೆ ಜು.20ರಂದು ಕೆಆರ್‌ಎಸ್ ಅಣೆಕಟ್ಟೆಗೆ ಸಿಎಂ ಬಾಗಿನ ಸಲ್ಲಿಸುವ ಹಿನ್ನೆಲೆಯಲ್ಲಿ ಹೊರಹರಿವಿನ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ.
ಪರಿಣಾಮ ಕಾವೇರಿ ನದಿಯಲ್ಲಿ ಪ್ರವಾಹದ ಪ್ರಮಾಣ ಇಳಿಕೆಯಾದ ನಡುವೆ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯ ಸಮೀಪ, 6 ಕಿ.ಮೀ. ದೂರ ಕೊಚ್ಚಿಕೊಂಡು ಹೋಗಿ ಖಾಸಗಿ ವಿದ್ಯುತ್ ಉತ್ಪಾದನಾ ಕಾರ್ಯಗಾರದ ತಡೆಗೋಡೆಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಶವವನ್ನು ಹೊರತೆಗೆದಿದ್ದಾರೆ.
ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ ಹಾಕಿದ್ದು ಹುಚ್ಚ ವೆಂಕಟ್​ ಅಲ್ಲ, SSLC ವಿದ್ಯಾರ್ಥಿ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಉಣಕಲ್​ ಕೆರೆಗೆ ಹಾರಿ ತಮ್ಮ ಆತ್ಮಹತ್ಯೆ: ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ… ಸಹೋದರರಿಬ್ಬರ ದುರಂತ ಸಾವು

ಹನಿಟ್ರ್ಯಾಪ್​ ಕೇಸಲ್ಲಿ ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ: ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಈಕೆ ಹಿನ್ನೆಲೆ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − three =
Remember me
