ಮಂಡ್ಯ:ಕಟ್ಟೆ-ಚೆಕ್​ ಡ್ಯಾಂಗಳನ್ನು ನಿರ್ಮಿಸುವ ಮೂಲಕ ಕೆರೆ ಕಾಮೇಗೌಡ ಎಂದೇ ಪ್ರಖ್ಯಾತಿ ಪಡೆದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ(84) ಅವರು ಸೋಮವಾರ ನಿಧನರಾದರು.
ಕುಂದೂರು ಬೆಟ್ಟದ ತಪ್ಪಲಿನಲ್ಲಿ 16 ಕಟ್ಟೆಗಳನ್ನು ನಿರ್ಮಿಸಿ ಪ್ರಾಣಿ-ಪಕ್ಷಿಗಳಿಗೆ ಕುಡಿವ ನೀರೊದಗಿಸಿದ, ಅಂತರ್ಜಲ ವೃದ್ಧಿಗೆ ಪ್ರಮುಖ ಕೊಡುಗೆ ನೀಡಿದ, ಬೆಟ್ಟದ ತಪ್ಪಲಿನಲ್ಲಿ ಗಿಡನೆಟ್ಟು ಪರಿಸರ ಕಾಳಜಿ ಮೆರೆದ ಕಾಮೇಗೌಡರು ‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಎಂದೇ ಹೆಸರುವಾಸಿಯಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ ಸೇರದಂತೆ ಹಲವು ಪ್ರಶಸ್ತಿಗಳು ಕಾಮೇಗೌಡರಿಗೆ ಸಂದಿವೆ.

2020ರ ಜು.28ರಂದು ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದರು. ಇದಾದ ಮರುದಿನ ಕಾಮೇಗೌಡರು ಜಮೀನಿನಲ್ಲಿ ಕೆಲಸ ಮಾಡುವಾಗ ಗಿಡದ ಕಡ್ಡಿ ತಗುಲಿ ಬಲಗಾಲಿಗೆ ಗಾಯವಾಗಿತ್ತು. ಬಳಿಕ ಇವರನ್ನು ಭೇಟಿ ಮಾಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಕಾರಣ ಚಿಕಿತ್ಸೆ ಪಡೆದಿರಲಿಲ್ಲ. ಇದರಿಂದಾಗಿ ಕಾಲು ಹೂದಿಕೊಂಡಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದರು. ಒಮ್ಮೆ ಕರೊನಾ ಸೋಕು ತಗುಲಿತ್ತು, ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ನಂತರ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಸೋಮವಾರ ಬೆಳಗ್ಗೆ ಮನೆಯಲ್ಲೇ ಕೊನೆಯುಸಿರೆಳೆದರು.

ರಾಜ್ಯದಲ್ಲಿ ಬೆರಕೆ ಸರ್ಕಾರ ಬರೋದು ಗ್ಯಾರಂಟಿ.. ದೇಶಕ್ಕೆ ಕೇಡು ಖಚಿತ… ಹಾಸನಾಂಬೆ ಸನ್ನಿಧಿಯಲ್ಲಿ ಬ್ರಹ್ಮಾಂಡ ಗುರೂಜಿ ಭವಿಷ್ಯ

ಎಫ್​​ಡಿಎ ನೌಕರಿ ಆಮಿಷವೊಡ್ಡಿ 25 ಲಕ್ಷ ರೂ. ವಂಚನೆ! ದಂಪತಿ ಸೇರಿ ಮೂವರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 9 =
Remember me
