ಮಂಡ್ಯ:ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಗ್ರಾಮದಲ್ಲಿ ಶನಿವಾರ ರಾತ್ರಿ ಕೊಲೆಯಾದ ಒಂದೇ ಕುಟುಂಬದ ಐವರ ಅಂತ್ಯಸಂಸ್ಕಾರವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಸಾಮೂಹಿಕವಾಗಿ ಮಾಡಲಾಯಿತು.
ಮೈಸೂರಿನ ಕೆ.ಆರ್​.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಸ್ವಗ್ರಾಮದಲ್ಲಿ ಕಾವೇರಿ ಡ್ಯಾಂ ಪಕ್ಕದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿತು. ಪತ್ನಿ, ಮೂವರು ಮಕ್ಕಳು, ಅಣ್ಣನ ಮಗ ಸೇರಿ ಐವರ ಸಾವಿನ ಸುದ್ದಿ ಕೇಳಿ ಕಣ್ಣೀರಿಡುತ್ತಲೇ ಗ್ರಾಮಕ್ಕೆ ಬಂದ ಗಂಗಾರಾಮ್, ಮೃತರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಗೂ ಮುನ್ನ ಗ್ರಾಮದಲ್ಲಿ ಶವಗಳನ್ನ ಮೆರವಣಿಗೆ ಮಾಡಲಾಯಿತು. ಅಂತಿಮ ಯಾತ್ರೆಯಲ್ಲಿ ಕಣ್ಣೀರಿಡುತ್ತಲೇ ಗ್ರಾಮಸ್ಥರು ಹೆಜ್ಜೆ ಹಾಕಿದ ದೃಶ್ಯ ಮನಕಲಕುವಂತಿತ್ತು. ಎಲ್ಲವನ್ನೂ ಕಳೆದುಕೊಂಡ ಗಂಗರಾಮ್​ನ ಸ್ಥಿತಿ ನೋಡಿದ್ರೆ ಕರುಳು ಚುರ್ ಅನ್ನುವಂತಿತ್ತು. ಸಂಬಂಧಿಕರು- ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಗ್ರಾಮದ ಬಜಾರ್​ ಲೈನ್​ನಲ್ಲಿ ವಾಸವಿದ್ದ ಗಂಗಾರಾಮ್​ ಎಂಬುವರ ಪತ್ನಿ ಲಕ್ಷ್ಮಮ್ಮ(30) ಮತ್ತು ಇವರ ಮಕ್ಕಳಾದ ರಾಜ್​(12), ಕೋಮಲ್​(8), ಕುನಾಲ್​(5) ಹಾಗೂ ಗಂಗಾರಾಮ್​ ಅವರ ಸಹೋದರನ ಮಗ ಗೋವಿಂದ(10) ಸೇರಿ ಐವರನ್ನು ಶನಿವಾರ ರಾತ್ರಿ ಯಾರೋ ದುಷ್ಕರ್ಮಿಗಳು ಭೀಕರವಾಗಿ ಕೊಂದು ಪರಾರಿಯಾಗಿದ್ದಾರೆ. ಪುಟ್ಟ ಮಕ್ಕಳನ್ನೂ ಮನಬಂದಂತೆ ಮಾರಾಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರು ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪೊಲೀಸರು ವಿವಿಧ ಆಯಾಮದಲ್ಲಿ ತನಿಖೆ ಪ್ರಾರಂಭಿಸಿದ್ದಾರೆ
ಮಂಡ್ಯದಲ್ಲಿ ಒಂದೇ ಕುಟುಂಬದ ಐವರ ಭೀಕರ ಕೊಲೆ: ಮನೆ ಬಾಗಿಲು ಮುರಿದಿಲ್ಲ.. ಆ ರಾತ್ರಿ ಇವರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ಲವರ್​ ಜತೆ ಮದ್ವೆ ಆಗ್ಬೇಕು, 18 ವರ್ಷ ಆಗುವರೆಗೂ ನನ್ನನ್ನು ಬಾಲಮಂದಿರದಲ್ಲಿಡಿ… ಠಾಣೆ ಮೆಟ್ಟಿಲೇರಿದ ಪಿಯು ವಿದ್ಯಾರ್ಥಿನಿ

ತಿಂಡಿ ತಿನ್ನಲು ಕುಳಿತ ಕಾನೂನು ವಿದ್ಯಾರ್ಥಿ ಹಠಾತ್​ ಸಾವು! ಹುಣಸೂರಲ್ಲಿ ಘಟನೆ, ಸಾವಿನ ಕೊನೇ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twelve =
Remember me
