ಮಂಡ್ಯ:ಪ್ರೇಮ ಪ್ರಕರಣ ಸಂಬಂಧ 17 ವರ್ಷದ ಬಾಲಕನನ್ನು ಮನೆಗೆ ಕರೆಸಿಕೊಂಡ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ಮಾರಣಾಂತಿಕ ಹಲ್ಲೆ ಮಾಡಿ ಆತನ ಸಾವಿಗೆ ಕಾರಣವಾದ ಘಟನೆ ಮಂಡ್ಯ ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಸಂಭವಿಸಿದೆ.
ಕಲ್ಲಹಳ್ಳಿ ಬಡಾವಣೆಯ 17 ವರ್ಷದ ಬಾಲಕ ಮೃತ. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗು ಕೊಲೆ ಆರೋಪಿ. ಇದೇ ಬಡಾವಣೆಯ ಶಿವಲಿಂಗು ಅವರ ಮಗಳನ್ನು ಬಾಲಕ ಪ್ರೀತಿಸುತ್ತಿದ್ದ. ಈ ವಿಚಾರ ತಿಳಿದ ಬಾಲಕಿ ತಂದೆ, ನಿನ್ನೆ(ಬುಧವಾರ) ರಾತ್ರಿ ಮಗಳ ಪ್ರಿಯಕರನನ್ನು ತನ್ನ ಮನೆಗೆ ಕರೆಸಿಕೊಂಡಿದ್ದು, ಈ ವೇಳೆ ಮನೆಯವರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಇದನ್ನೂ ಓದಿರಿಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ
ಗುರುವಾರ ಮುಂಜಾನೆ ಗಾಯಾಳು ಬಾಲಕನಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾಗೆ ಕರೆದೊಯ್ಯಲಾಯಿತಾದರೂ ಆತ ಬದುಕಲಿಲ್ಲ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಆರೋಪಿ ಶಿವಲಿಂಗು ಬಂಧನಕ್ಕೆ ಆಗ್ರಹಿಸಿ ಮೃತನ ಸಂಬಂಧಿಕರು ಬಾಲಕಿ ಮನೆ ಎದುರು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದರು. ಬಾಲಕ ಶವದೊಂದಿಗೆ ಪಶ್ಚಿಮ ಪೊಲೀಸ್ ಠಾಣೆ ಎದುರು ಧರಣಿ ಕೂರುವುದಾಗಿ ಎಚ್ಚರಿಸಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + thirteen =
Remember me
