ಮಂಡ್ಯ:ಐಟಿಐ ಕಾಲೇಜಿನ ಪ್ರಿನ್ಸಿಪಾಲ್​ವೊಬ್ಬರಿಗೆ ಸಹೋದ್ಯೋಗಿಗಳ ಸಮ್ಮುಖದಲ್ಲೇ ಮಂಡ್ಯ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್​ ಕಪಾಳ ಮೋಕ್ಷ ಮಾಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದ್ದು, ಶಾಸಕರ ವರ್ತನೆಗೆ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.
ಮಂಡ್ಯದ ಐಟಿಐ ಕಾಲೇಜಿನಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಇತ್ತು. ಇಲ್ಲಿಗೆ ಶಾಸಕರು ಆಗಮಿಸಿದ್ದರು. ಈ ವೇಳೆ ಕಾಲೇಜಿನ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಎಂದು ಪ್ರಿನ್ಸಿಪಾಲ್​ ನಾಗನಂದ್​ರ ವಿರುದ್ಧ ಗರಂ ಆದ ಶಾಸಕ ಶ್ರೀನಿವಾಸ್​, ಎಲ್ಲರ ಎದುರೇ ಐದಾರು ಬಾರಿ ಕಪಾಳಕ್ಕೆ ಬಾರಿಸಲು ಯತ್ನಿಸಿದರಲ್ಲದೆ, 2 ಬಾರಿ ಹೊಡೆದಿದ್ದಾರೆ. ಹೆದರಿದ ಪ್ರಿನ್ಸಿಪಾಲರು, ‘ಇರ್ಲಿ.. ಇರ್ಲಿ.. ಸರ್​..’ ಎನ್ನುತ್ತಾ ಸುಮ್ಮನೆ ನಿಲ್ಲುತ್ತಾರೆ. ಈ ದೃಶ್ಯ ವೈರಲ್​ ಆಗಿದೆ.

ಕಾಲೇಜಿನಲ್ಲಿ ಸೂಕ್ತ ನಿರ್ವಹಣೆ ಇಲ್ಲವಾದಲ್ಲಿ ಅಥವಾ ತಪ್ಪು ಮಾಹಿತಿ ನೀಡಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು, ಅದನ್ನು ಬಿಟ್ಟು ಕಪಾಳಕ್ಕೆ ಹೊಡೆದದ್ದು ಎಷ್ಟು ಸರಿ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ರಾಜ ವಂಶಸ್ಥರ ಜತೆ ಉಪಾಹಾರ ಸೇವಿಸಿದ ಪ್ರಧಾನಿ ಮೋದಿ: ಸ್ಪೆಷಲ್​ ಮೈಸೂರು​ ಪಾಕ್ ಸೇರಿ 10 ಬಗೆಯ ಖಾದ್ಯ

ಯೋಗಕ್ಕೆ ಧರ್ಮದ ಪಟ್ಟಿ ಕಟ್ಟಿರುವುದು ಬೇಸರ: ನಟಿ ಅದಿತಿ ಪ್ರಭುದೇವ ವಿಷಾದ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 + nine =
Remember me
