ಕೆ.ಆರ್​.ಪೇಟೆ:ಮಂಡ್ಯ ಜಿಲ್ಲೆಯ ತ್ರಿವೇಣಿ ಸಂಗಮದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ “ಐತಿಹಾಸಿಕ ಮಹಾ ಕುಂಭಮೇಳ”ಕ್ಕೆ ಗುರುವಾರ ವಿದ್ಯುಕ್ತ ಚಾಲನೆ ದೊರೆಯಿತು. ನಾಳೆ(ಅ.14) ಬೆಳಗ್ಗೆ 11 ಗಂಟೆಗೆ ಮಹಾ ಕುಂಭಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ. ಮೊದಲ ದಿನ ಪೂಜೆ ಹಾಗೂ ಸಾಂಸ್ಕೃತಿಕ ಉತ್ಸವ ಮೇಳೈಸಿತು. ತ್ರಿವೇಣಿ ಸಂಗಮ ಸಂಪೂರ್ಣ ಕೇಸರಿಮಯವಾಗಿದ್ದು, ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದಾರೆ.
ಮಲೆಮಹದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳ ತಾಲೂಕಿನ ಅಂಬಿಗರಹಳ್ಳಿ- ಸಂಗಾಪುರ- ಪುರ ಗ್ರಾಮಗಳ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಇಂದು ಮುಂಜಾನೆ 5 ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ದೇವಾಲಯ ಪ್ರವೇಶ ಮಾಡಲಾಯಿತು. ಬೃಹತ್​ ಭಗವಾಧ್ವಜ ಸ್ಥಾಪನೆ ಮಾಡಿ, ಹೋಮ-ಹವನದ ಮೂಲಕ ಮಲೆಮಹದೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕೈಂಕರ್ಯ ನೆರವೇರಿತು. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಪೂಜೆಯಲ್ಲಿ ಪಾಲ್ಗೊಂಡರು. ಚಂದ್ರವನ ಆಶ್ರಮದ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಜಿಲ್ಲಾಧಿಕಾರಿ ಎಸ್​. ಅಶ್ವಥಿ, ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಸೀಲ್ದಾರ್​ ಎಂ.ವಿ.ರೂಪಾ ಸೇರಿದಂತೆ ಹಲವರಿದ್ದರು. ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ವೈಭವದ ಉತ್ಸವ:ಮಹಾ ಕುಂಭಮೇಳದ ಅಂಗವಾಗಿ ಕೆ.ಆರ್​.ಪೇಟೆ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ ಉತ್ಸವ ನಡೆಯಿತು. ಇದಕ್ಕೂ ಮುನ್ನ ಮಹಿಳೆಯರಿಗಾಗಿ ರಂಗೋಲಿ ಬಿಡಿಸುವ ಹಾಗೂ ಮೆಹಂದಿ ಹಾಕುವ ಸ್ಪರ್ಧೆ ನಡೆಯಿತು.
ಮಲೆಮಹದೇಶ್ವರ ಬೆಟ್ಟದಿಂದ ವಿವಿಧ ಮಾರ್ಗಗಳಲ್ಲಿ ಹೊರಟಿದ್ದ ಮೂರು ಜ್ಯೋತಿ ರಥಯಾತ್ರೆಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಈ ವೇಳೆ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ನಂತರ ಮೂಡಬಿದರೆ ಆಳ್ವಾಸ್​ ಸಂಸ್ಥೆಯ ನೇತೃತ್ವದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 112 ಸಾಂಸ್ಕೃತಿಕ ಕಲಾ ತಂಡಗಳಿಂದ ನಡೆದ ಮೆರವಣಿಗೆ ಅದ್ಭುತ ಅನುಭವ ನೀಡಿತು. ರಸ್ತೆಯುದ್ದಕ್ಕೂ ಇಕ್ಕೆಲಗಳಲ್ಲಿ ನಿಂತ ಸಾರ್ವಜನಿಕರು ಚಪ್ಪಾಳೆ, ಶಿಳ್ಳೆ ಹೊಡೆಯುವ ಮೂಲಕ ಕಲಾ ತಂಡಗಳನ್ನು ಹುರಿದುಂಬಿಸಿದರು.
ಇಂದು ಉದ್ಘಾಟನಾ ಸಮಾರಂಭ:ತ್ರಿವೇಣಿ ಸಂಗಮದಲ್ಲಿ ಅ. 14ರಂದು ಬೆಳಗ್ಗೆ 11ಗಂಟೆಗೆ ಮಹಾ ಕುಂಭಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ. ಆದಿಚುಂಚಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದಜೀ ಮಹರಾಜ್​, ಶ್ರೀ ಶಿವಾನಂದಪುರಿ ಸ್ವಾಮೀಜಿ, ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಧ್ವಜಾರೋಹಣ ನೆರವೇರಿಸಲಿದ್ದು, ಸಚಿವ ಕೆ.ಸಿ.ನಾರಾಯಣಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 2 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ಆದೇಶ

300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗನ್ನು ವಾರಸುದಾರರಿಗೆ ಒಪ್ಪಿಸಿದ ತುಮಕೂರಿನ ಗುರುರಾಜ್​! ಕಣ್ಣೀರಿಟ್ಟು ಕೈಮುಗಿದ ಶಿವಮೊಗ್ಗದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + eighteen =
Remember me
