ಪುತ್ತೂರು:ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಾಗಿದೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಮಂಗಳವಾರ ಸಂಜೆ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಹತ್ಯೆ ಖಂಡಿಸಿ ಹಿಂದು ಸಂಘಟನೆಯ ಕಾರ್ಯಕರ್ತರು, ಸ್ಥಳೀಯರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವು ಆಕ್ರೋಶ ಹೊರಹಾಕಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪುತ್ತೂರು ಉಪವಿಭಾಗೀಯ ಅಧಿಕಾರಿ ಗಿರೀಶ್ ನಂದನ್ ಅವರು ಮುಂಜಾಗ್ರತಾಕ್ರಮವಾಗಿ ಪುತ್ತೂರು ಉಪವಿಭಾಗ ವ್ಯಾಪ್ತಿಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬದಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರಿಸಲಾಗಿದ್ದು, ಪುತ್ತೂರಿನಿಂದ ಬೆಳ್ಳಾರೆವರೆಗೆ ಶವಯಾತ್ರೆ ಹೊರಟಿದೆ. ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲಾಗುತ್ತಿದ್ದು, ದಾರಿಯುದ್ದಕ್ಕೂ ಖಾಕಿ ಕಣ್ಗಾವಲಿದೆ.
ಏನಿದು ಪ್ರಕರಣ: ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್(32) ಎಂಬುವರನ್ನು ಮಂಗಳವಾರ ರಾತ್ರಿ ಬೈಕ್​ನಲ್ಲಿ ಬಂದ ದುಷ್ಕರ್ವಿುಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದಿದ್ದಾರೆ. ಅಕ್ಷಯ ಚಿಕನ್ ಸೆಂಟರ್ ಮಾಲೀಕರಾಗಿದ್ದ ಪ್ರವೀಣ್, ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಬಜರಂಗದಳ ಮತ್ತಿತರ ಹಿಂದು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಪ್ರವೀಣ್ ಅಂಗಡಿಯಲ್ಲಿ ಕುಳಿತುಕೊಂಡಿದ್ದ ವೇಳೆ ಕೇರಳ ನೋಂದಣಿಯ ಬೈಕ್​ನಲ್ಲಿ ಇಬ್ಬರು ಆಗಮಿಸಿದ್ದರು. ಇದನ್ನು ಗಮನಿಸಿದ ಪ್ರವೀಣ್ ತಪ್ಪಿಸಿಕೊಳ್ಳಲೆಂದು ಪಕ್ಕದ ಅಂಗಡಿಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ದುಷ್ಕರ್ವಿುಗಳು ಪ್ರವೀಣ್ ತಲೆಗೆ ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ.
ಕಳೆದ ಮಂಗಳವಾರ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್(19) ಎಂಬಾತನ ಮೇಲೆ 8 ಮಂದಿಯ ತಂಡ ಹಲ್ಲೆಗೈದಿತ್ತು. ಗಂಭೀರ ಗಾಯಗೊಂಡಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಎರಡು ದಿನದ ಬಳಿಕ ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಪ್ರವೀಣ್ ಅವರನ್ನು ಹತ್ಯೆಗೈಯಲಾಗಿದೆ ಎಂಬ ಸುದ್ದಿ ಹಬ್ಬಿದೆ. ಘಟನೆಯಿಂದ ಬೆಳ್ಳಾರೆಯಲ್ಲಿ ತುಸು ಉದ್ವಿಗ್ನ ಸ್ಥಿತಿ ನಿರ್ವಣವಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ಬೆನ್ನಲ್ಲೇ ಪೊಲೀಸರು ಪುತ್ತೂರು ಹಾಗೂ ಬೆಳ್ಳಾರೆ ಪೇಟೆಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಬೆದರಿಕೆ ಕರೆ ಬಂದಿತ್ತು ಪ್ರವೀಣ್ ಅವರಿಗೆ ವಿದೇಶದಿಂದ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಅವರು ಬಿಜೆಪಿ ಮುಖಡರಿಗೆ ತಿಳಿಸಿದ್ದರು ಎನ್ನಲಾಗಿದೆ.
ಮಧುಚಂದ್ರಕ್ಕೆ ಹೋಗಬೇಕಿದ್ದ ನವವಿವಾಹಿತ ಆಸ್ಪತ್ರೆಗೆ… ತಡರಾತ್ರಿ ಕುಸಿದುಬಿದ್ದ ಮನೆಯ ಗೋಡೆ, ಛಾವಣಿ…

ಗಾಂಜಾ ಗ್ಯಾಂಗ್​ ಹಿಡಿಯಲು ಹೊರಟ್ಟಿದ್ದ ವೇಳೆ ಅಪಘಾತ: ಪಿಎಸ್​ಐ ದೀಕ್ಷಿತ್​ರ ಆರೋಗ್ಯ ವಿಚಾರಿಸಿದ ಗೃಹಸಚಿವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
