ಮಂಗಳೂರು:ಮಂಗಳೂರು ವಿಶ್ವವಿದ್ಯಾಲಯದ ಪದವಿ ಪ್ರಾಧ್ಯಾಪಕರನ್ನೊಳಗೊಂಡ ಅಧಿಕೃತ ಟೆಲಿಗ್ರಾಂ ಗ್ರೂಪ್‌ಗೆ ಪ್ರಾಧ್ಯಾಪಕರೊಬ್ಬರು ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಿರುವ ಪ್ರಕರಣವನ್ನು ವಿವಿ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸೈಬರ್ ತಜ್ಞರ ಮೂಲಕ ತನಿಖೆಗೆ ಮುಂದಾಗಿದೆ.
ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪದವಿ ಕಾಲೇಜುಗಳ 1 ಸಾವಿರಕ್ಕೂ ಅಧಿಕ ಮಂದಿ ಈ ಟೆಲಿಗ್ರಾಂ ಗ್ರೂಪ್‌ನಲ್ಲಿ ಸದಸ್ಯರಾಗಿದ್ದಾರೆ. ಪರೀಕ್ಷೆಗಳ ಹಾಗೂ ಇತರ ಮಾಹಿತಿ ನೀಡಲು ವಿಶ್ವವಿದ್ಯಾಲಯದಿಂದಲೇ ಅಧಿಕೃತವಾಗಿ ಈ ಗ್ರೂಪ್ ರಚಿಸಲಾಗಿತ್ತು. ಬುಧವಾರ ಮಧ್ಯಾಹ್ನ ಕೊಡಗು ಜಿಲ್ಲೆಯ ಆಂಗ್ಲಭಾಷೆ ಪ್ರಾಧ್ಯಾಪಕರೊಬ್ಬರು ಅಶ್ಲೀಲ ವಿಡಿಯೋವನ್ನು ಗ್ರೂಪ್‌ನಲ್ಲಿ ಅಪ್‌ಲೋಡ್ ಮಾಡಿದ್ದರು. ಇದಕ್ಕೆ ಇತರ ಪ್ರಾಧ್ಯಾಪಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ವಿಶ್ವವಿದ್ಯಾಲಯ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಸಂಬಂಧಪಟ್ಟ ಪ್ರಾಧ್ಯಾಪಕರಿಗೆ ಸ್ಪಷ್ಟನೆ ಕೇಳಿ ನೋಟಿಸ್ ಜಾರಿ ಮಾಡಿದೆ. ಆಕಸ್ಮಿಕವಾಗಿ ವಿಡಿಯೋ ಬಂದಿದೆಯೋ ಅಥವಾ ಉದ್ದೇಶಪೂರ್ವಕವಾಗಿ ಹಾಕಿದ್ದಾರೆಯೇ ಎಂಬುದನ್ನು ತನಿಖೆ ಮಾಡಬೇಕಿದೆ. ಸೈಬರ್ ತಜ್ಞರ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ
ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?
ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight + fourteen =
Remember me
