ಮಂಗಳೂರು:ಸುರತ್ಕಲ್​ನ ಎನ್ಐಟಿಕೆ ಟೋಲ್​ ತೆರವಿಗೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಮಂಗಳವಾರ ಟೋಲ್​ಗೇಟ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.

ಟೋಲ್ ಗೇಟ್ ಕಿತ್ತೆಸೆಯಲು ನೇರ ಕಾರ್ಯಾಚರಣೆಗೆ ಕರೆ ನೀಡಿದ್ದ ಸಮಿತಿಯು ಸರ್ವೀಸ್​ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಾ ಟೋಲ್​ಗೇಟ್​ ಬಳಿ ಬರುತ್ತಿರುವಾಗಲೇ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಆದಾಗ್ಯೂ ಹಲವರು ಟೋಲ್​ಗೇಟ್​ಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ಮಂಗಳೂರಿನ ಹೊರ ವಲಯದ ಸುರತ್ಕಲ್​ನ ಟೋಲ್​ಗೇಟ್​ನಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸಬೇಕು ಎಂದು ನೂರಾರು ಮಂದಿ ಆಗ್ರಹಿಸಿದರು. ಟೋಲ್ ಕಿತ್ತೆಸೆಯೋದಾಗಿ ಟೋಲ್ ವಿರೋಧಿ ಸಮಿತಿ ಎಚ್ಚರಿಕೆ ನೀಡಿದ್ದ ಹಿನ್ನೆಲೆ ಟೋಲ್ ಸುತ್ತ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ. ಈ ವೇಳೆ ಟೋಲ್​ಗೇಟ್​ಗೆ ಮುತ್ತಿಗೆ ಹಾಕಿದ ಹಲವರನ್ನ ವಶಕ್ಕೆ ಪಡೆದ ಪೊಲೀಸರು ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದ ದೃಶ್ಯ ಕಂಡು ಬಂತು.

ಪ್ರತಿಭಟನಾಕಾರರು ರಾಜ್ಯ ಸರ್ಕಾರ ಮತ್ತು ಸಂಸದ ನಳಿನ್ ಕುಮಾರ್​ ಕಟೀಲ್​, ಶಾಸಕ ಭರತ್ ಶೆಟ್ಟಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ‌ಮುಖಂಡರಾದ ವಿನಯ್ ಕುಮಾರ್ ಸೊರಕೆ, ಸಿಪಿಎಂ, ಡಿವೈಎಫ್​ಐ ಮುಖಂಡರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮತ್ತೊಂದು ಐತಿಹಾಸಿಕ ಹೋರಾಟಕ್ಕೆ ಸಜ್ಜಾಗಿ… ಒಕ್ಕಲಿಗ ಸಮುದಾಯಕ್ಕೆ ಆದಿಚುಂಚನಗಿರಿ ಶ್ರೀಗಳು ಕರೆ

ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆ: ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eighteen =
Remember me
