ಬೆಂಗಳೂರು:ಮಂತ್ರಿ ಗ್ರೂಪ್ ಎಂಡಿ ಸುಶೀಲ್ ಮತ್ತು ಇವರ ಪುತ್ರ ಪ್ರತೀಕ್​ ಅವರನ್ನು ಶುಕ್ರವಾರ ತಡರಾತ್ರಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದಕ್ಷಿಣ ಭಾರತದ ಅತೀ ದೊಡ್ಡ ರಿಯಲ್​ ಎಸ್ಟೇಟ್​ ಸಂಸ್ಥೆ ಇದಾಗಿದ್ದು, ಹೂಡಿಕೆದಾರರಿಗೆ ವಂಚಿಸಿದ ಆರೋಪದಡಿ 2019ರ ಜುಲೈನಲ್ಲಿ ಮಂತ್ರಿ ಡೆವಲಪರ್ಸ್​ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಏಳೆಂಟು ಪ್ರಕರಣ ದಾಖಲಾಗಿದ್ದವು. 2021ರ ಜೂನ್ 26ರಂದು ಮಂತ್ರಿ ಗ್ರೂಪ್​ ಮೇಲೆ ಐಟಿ ದಾಳಿಯಾಗಿತ್ತು. ಆಗ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದಿದ್ದ ಐಟಿ ಅಧಿಕಾರಿಗಳು, ದಾಖಲೆಗಳ ಸಮೇತ ಇಡಿಗೆ ಮಾಹಿತಿ ನೀಡಿತ್ತು. ಇಡಿ ಅಧಿಕಾರಿಗಳು ಕಳೆದ ಜೂನ್​ 25ರಂದು ಬಂಧಿಸಿದ್ದರು. ಬಳಿಕ ಸುಶೀಲ್​ ಅವರು ಜಾಮೀನಿನ ಮೇಲೆ ಹೊರ ಬಂದಿದ್ದರು. ಇನ್ನೊಂದೆಡೆ ಕಬ್ಬನ್ ಪಾರ್ಕ್ ಠಾಣೆಯ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ನಿನ್ನೆ ರಾತ್ರಿ(ಶುಕ್ರವಾರ) ಸಿಐಡಿ ಅಧಿಕಾರಿಗಳು ಸುಶೀಲ್​ ಮತ್ತು ಅವರ ಪುತ್ರನನ್ನು ಬಂಧಿಸಿ, ಶನಿವಾರ ಬೆಳಗ್ಗೆ ಕೋರ್ಟ್​ಗೆ ಹಾಜರು ಪಡಿಸಿದ್ದರು. ಸೆಪ್ಟೆಂಬರ್ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.
ವೈಯಕ್ತಿಕ ಮತ್ತು ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮ ಆರೋಪ ಹಿನ್ನೆಲೆ ಪ್ರಿವೆನ್ಷನ್ ಆಫ್ ಮನಿ ಲ್ಯಾಂಡರಿಂಗ್ ಆಕ್ಟ್ ಅಡಿ ವಿಚಾರಣೆ ಸುಶೀಲ್ ಅವರನ್ನು ಇಡಿ ಅಧಿಕಾರಿಗಳು ಈ ಹಿಂದೆ ವಿಚಾರಣೆ ನಡೆಸಿದ್ದರು.
ಅನೇಕ ಪ್ರಥಮಗಳ ಒಡತಿ ರಾಣಿ ಎಲಿಜಬೆತ್​! ಇಲ್ಲಿದೆ ಜೀವನಪಥ… ತನ್ನ ಅಜ್ಜಿ ವಿಕ್ಟೋರಿಯಾ ಹೆಸರಲ್ಲಿದ್ದ ದಾಖಲೆಯನ್ನೂ ಮುರಿದಿದ್ದರು

ಬೆಂಗ್ಳೂರಲ್ಲಿ 14 ವರ್ಷದ ಬಾಲಕಿಯನ್ನ ಮದ್ವೆಯಾದ 45 ವರ್ಷದ ಅಂಕಲ್​! ಮದ್ವೆಯಾದ 3 ದಿನದಲ್ಲೇ ಆಯ್ತು ತಕ್ಕಶಾಸ್ತಿ

ಕಲಾತ್ಮಕ ಸಹಿಯ ಶಾಂತಯ್ಯ ಇನ್ನಿಲ್ಲ: ಸಾವಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಉಪನೋಂದಣಾಧಿಕಾರಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × 3 =
Remember me
