ಹಾವೇರಿ:ಆತನಿಗಿನ್ನೂ ಬರೀ ಇಪ್ಪತ್ತೈದು ವರ್ಷ. ವಿವಾಹಿತನಾಗಿದ್ದ ಆತನಿಗೆ ಹೆಂಡತಿಯ ಊರಿನಲ್ಲೇ ಜೀವ ಕಳೆದುಕೊಳ್ಳುವಂತಾಗಿದೆ. ಇನ್ನೇನು ತನ್ನೂರಿಗೆ ಹೋಗಬೇಕೆಂದು ಹೊರಟಿರುವಾಗಲೇ ಯಮರಾಯ ಎದುರಾಗಿ, ತನ್ನೊಂದಿಗೆ ಕರೆದೊಯ್ದಿದ್ದಾನೆ.
ಹೀಗೆ ಹೆಂಡತಿಯ ಊರಿನಲ್ಲಿ ಜೀವ ಕಳೆದುಕೊಂಡ ಯುವಕನ ಹೆಸರು ಯಲ್ಲಪ್ಪ ಲಮಾಣಿ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿಯವನಾದ ಈತ ಇದೇ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿರುವ ಹೆಂಡತಿಯ ಊರಿಗೆ ಬಂದಿದ್ದಾಗ ಮೃತಪಟ್ಟಿದ್ದಾನೆ.
ಇದನ್ನೂ ಓದಿ:ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ
ಹೆಂಡತಿಯ ಮನೆಯಿಂದ ವಾಪಸ್ ತನ್ನೂರಿಗೆ ಹೊರಟ ಯಲ್ಲಪ್ಪ, ಬ್ಯಾಡಗಿಯ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ವಾಹನಕ್ಕೆ ಕಾಯುತ್ತಿದ್ದ ಸಂದರ್ಭದಲ್ಲಿ ಸಾವು ಎದುರಾಗಿದೆ. ಅಂದರೆ ಆಗ ಎದುರಿನಿಂದ ಬಂದ ಕಾರೊಂದು ಯಲ್ಲಪ್ಪಗೆ ಜೋರಾಗಿ ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಇದನ್ನೂ ಓದಿ:ಮೈಮೇಲೇ ಲಾರಿ ಚಲಿಸಿ 3 ವರ್ಷದ ಮಗು ಸ್ಥಳದಲ್ಲೇ ಸಾವು; ಪುತ್ರಿಯೊಂದಿಗೆ ದಂಪತಿ ಸಾಗುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ
ನಾಳೆಯಿಂದ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ; ಯಾವ್ಯಾವ ಜಿಲ್ಲೆಗೆ ಎಷ್ಟು ದಿನ ಅನ್ವಯ? ಇಲ್ಲಿದೆ ಮಾಹಿತಿ..

ಕಡಿಮೆ ದರದಲ್ಲಿ ಸ್ವಂತ ಮನೆ ಆಕಾಂಕ್ಷಿಗಳಿಗೆ ಸಚಿವ ಮುರುಗೇಶ್​ ನಿರಾಣಿ ನೀಡಿದರೊಂದು ಗುಡ್​ನ್ಯೂಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + seventeen =
Remember me
