ಬೆಂಗಳೂರು:ಮೇಕೆದಾಟು ಯೋಜನೆ ಅನುಷ್ಠಾನ ವಿಷಯದಲ್ಲಿ ಯಾವುದೇ ರಾಜಿಯಿಲ್ಲ. ಇದಕ್ಕಾಗಿ ಯಾರಾದರೂ ಹೋರಾಟ ಮಾಡುತ್ತಿದ್ದರೆ, ರಾಜಕೀಯ ಉದ್ದೇಶವೇ ಹೊರತು ಬೇರೇನಲ್ಲ. ಇಂತಹ ಹೋರಾಟ ಪರಿಗಣಿಸುವುದಿಲ್ಲ, ಸಂಬಂಧವೇ ಇಲ್ಲ, ಲೆಕ್ಕಕ್ಕೂ ಇಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಆಗಿ ಹೇಳಿದರು.
ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ತಮಿಳುನಾಡಿನಲ್ಲಿ ರಾಜಕೀಯ ಕಾರಣಕ್ಕಾಗಿ ಈ ಯೋಜನೆಯನ್ನು ವಿರೋಧಿಸಲಾಗುತ್ತಿದೆ. ಕುಡಿಯುವ ನೀರು ಪೂರೈಕೆ ಹಾಗೂ ಸಂಕಷ್ಟ ಕಾಲದಲ್ಲಿ ಉಭಯ ರಾಜ್ಯಗಳಿಗೆ ನೀರು ಹಂಚಿಕೆಗಾಗಿ ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸುವ ಯೋಜನೆ ಇದಾಗಿದೆ ಎಂದು ತಮಿಳುನಾಡಿನವರಿಗೆ ಗೊತ್ತಿದೆ ಎಂದರು.
ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಒತ್ತಾಯಿಸಲಾಗಿದೆ. ಇತ್ತೀಚೆಗೆ ದೆಹಲಿಗೆ ತೆರಳಿದ ವೇಳೆ, ರಾಜ್ಯದ ಕೇಂದ್ರ ಸಚಿವರು, ಸಂಸದರ ಜತೆಗೂಡಿ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಡಿಪಿಆರ್ ಗೆ ಅನುಮತಿ ಸಹಿತ ಸಂಬಂಧಿಸಿದ ಇಲಾಖೆಗಳ ತೀರುವಳಿ ನೀಡುವಂತೆ ವಿನಂತಿಸಿದ್ದು, ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ‌ ಪುನರುಚ್ಚರಿಸಿದರು.
ಬಿಜೆಪಿಗೆ ಬಂದ ಶಾಸಕ ಮಹೇಶ್​ಗೆ ವೇದಿಕೆಯಲ್ಲೇ ಸಿಹಿ ಸುದ್ದಿ ಕೊಟ್ಟ ಬಿಎಸ್​ವೈ!

ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ…

ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eight =
Remember me
