ಮೇಲುಕೋಟೆ:ವಿಶ್ವ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿಗೆ ಕೃಷ್ಣರಾಜಮುಡಿ ಕಿರೀಟ ಧಾರಣಾ ಮಹೋತ್ಸವ ವಿಜೃಭಣೆಯಿಂದ ನೆರವೇರಿತು.ಆಷಾಢ ಜಾತ್ರಾ ಮಹೋತ್ಸವದ ಹಿನ್ನೆಲೆ ಗರುಡೋತ್ಸವದ 4ನೇ ದಿನವಾದ ಮಂಗಳವಾರ ರಾತ್ರಿ ಕೃಷ್ಣರಾಜಮುಡಿ ಕಿರೀಟ ಧಾರಣೆ ಮಾಡಲಾಯಿತು.
ಜಿಲ್ಲಾ ಖಜಾನೆಯಿಂದ ಪೊಲೀಸ್ ಭದ್ರತೆಯೊಂದಿಗೆ ತಂದ ಕೃಷ್ಣರಾಜಮುಡಿ ತಿರುವಾಭರಣ ಪೆಟ್ಟಿಗೆಯನ್ನು ದೇಶಿಕರ ಸನ್ನಿಧಿಯಲ್ಲಿ ಅಧಿಕಾರಿಗಳು ಮತ್ತು ಸ್ಥಾನಿಕರು ಅರ್ಚಕ ಪರಿಚಾರಕರ ಸಮ್ಮುಖದಲ್ಲಿ ಪರಿಶೀಲನೆ ಮಾಡಲಾಯಿತು. ದೇವಿ-ಭೂದೇವಿ ಅಮ್ಮನವರ ಸಮೇತ ಗರುಡಾರೂಢನಾದ ಶ್ರೀ ಚೆಲುವನಾರಾಯಣಸ್ವಾಮಿಗೆ ವಜ್ರಖಚಿತ ಕೃಷ್ಣರಾಜಮುಡಿ ಕಿರೀಟಧಾರಣೆ ಮಾಡಿ ಗಂಡುಬೇರುಂಡ ಪದಕ ಹಾಗೂ ಇತರ ಅಭರಣಗಳನ್ನು ತೊಡಿಸಿ ವಿಶೇಷ ಹೂಗಳಿಂದ ಸ್ವಾಮಿಯನ್ನು ಅಲಂಕರಿಸಿ ಮೆರವಣಿಗೆ ಮಾಡಿದ ನಂತರ ಮಹಾಮಂಗಳಾರತಿ ನೆರವೇರಿಸಿ ಕೃಷ್ಣ ರಾಜಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ದಿವ್ಯ ಪ್ರಬಂಧ ಹಾಗೂ ಮಂಗಳವಾದ್ಯದೊಂದಿಗೆ ರಾಜಬೀದಿಯಲ್ಲಿ ಉತ್ಸವ ವಿಜೃಭಣೆಯಿಂದ ನೆರವೇರಿತು. ನಂತರ ದೇವಾಲಯದಲ್ಲಿ ಪಡಿಯೆತ್ತ ಕಾರ್ಯಕ್ರಮಗಳು ನಡೆದವು. ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಸೀಲ್ದಾರ್ ನಯನಾ ದೇವಾಲಯದ ಅಧಿಕಾರಿ ಮಂಗಳಮ್ಮ ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು. ರಾತ್ರಿ 10 ಗಂಟೆಯವರೆಗೆ ನಡೆದ ಉತ್ಸವದಲ್ಲಿ ಭಕ್ತಸಮೂಹವೇ ನೆರೆದಿತ್ತು.

ಭಕ್ತರ ಮನಸೆಳೆದ ಆಭರಣ:ಮೈಸೂರು ರಾಜವಂಶಸ್ಥರಾದ ಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ಮನೆದೇವರಾದ ಶ್ರೀ ಚೆಲುವನಾರಾಯಣ ಸ್ವಾಮಿಗೆ ನೀಡಿದ ಕೆಂಪು, ಬಳಿ ವಜ್ರದ ಪಚ್ಚೆಮಣಿಯ ಸಿಂಹಲಾಂಛನವುಳ್ಳ ಕೃಷ್ಣರಾಜಮುಡಿ ಮತ್ತು ಗಂಡಭೇರುಂಡ ಪದಕ ಭಕ್ತರ ಕಣ್ಮನ ಸೆಳೆಯಿತು.
ಪಲ್ಲಕ್ಕಿ ಉತ್ಸವ ಮೆರವಣಿಗೆ: ಜಿಲ್ಲಾ ಖಜಾನೆಯಲ್ಲಿದ್ದ ಕೃಷ್ಣರಾಜಮುಡಿ ತಿರುವಾಭರಣ ಪೆಟ್ಟಿಗೆಯನ್ನು ಶಿವಳ್ಳಿ ಮಾರ್ಗವಾಗಿ ಮೇಲುಕೋಟೆಗೆ ತಂದು ಆಂಜನೇಯಸ್ವಾಮಿ ಗುಡಿಯಲ್ಲಿ ವಿಶೇಷ ಪೂಜಿಸಿ ಸಲ್ಲಿಸಿ, ಪಲ್ಲಕ್ಕಿಯಲ್ಲಿಟ್ಟು, ಶ್ವೇತಛತ್ರಿ ಮತ್ತು ಮಂಗಳವಾದ್ಯದೊಂದಿಗೆ ದೇವಾಲಯಕ್ಕೆ ಮೆರವಣಿಗೆ ಮೂಲಕ ತರಲಾಯಿತು. ಜು.24 ರವರೆಗೆ ಪ್ರತಿದಿನ ಸಂಜೆ ಕೃಷ್ಣರಾಜಮುಡಿ ಕಿರೀಟದಿಂದ ಚೆಲುವರಾಯಸ್ವಾಮಿಯನ್ನು ಅಲಂಕರಿಸಲಾಗುತ್ತದೆ.
ಸುತ್ತಲೂ ಕಾವೇರಿ ಉಕ್ಕಿ ಹರಿಯುತ್ತಿದ್ದರೂ ಮಂಡ್ಯ ನಗರಕ್ಕೆ ನೀರಿನ ಸಮಸ್ಯೆ! ಗೋವಾದಿಂದ ಬರಲಿದೆ ತಜ್ಞರ ತಂಡ…

ಹನಿಟ್ರ್ಯಾಪ್​ ಕೇಸಲ್ಲಿ ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ: ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಈಕೆ ಹಿನ್ನೆಲೆ ಇಲ್ಲಿದೆ

ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ ಹಾಕಿದ್ದು ಹುಚ್ಚ ವೆಂಕಟ್​ ಅಲ್ಲ, SSLC ವಿದ್ಯಾರ್ಥಿ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ: ಒಂದೇ ಕಾಲೇಜಿನಲ್ಲಿ ಓದುತ್ತಿದ್ದವರ ಬಾಳಲ್ಲಿ ದುರಂತ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:15 − 4 =
Remember me
