ಬೆಂಗಳೂರು:ರಾಮನಗರ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ ನಾರಾಯಣ್ 5 ಲಕ್ಷ ರೂಪಾಯಿ, ಮಾಗಡಿ ಶಾಸಕ ಮಂಜುನಾಥ್ 2 ಲಕ್ಷ ರೂ. ದೇಣಿಗೆ ನೀಡಿದರು.
ರಾಮನಗರದಲ್ಲಿ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ ಸಚಿವರು, 5 ಲಕ್ಷ ರೂ. ಮೊತ್ತ ಚೆಕ್​ ಅನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು. ಇದೇ ವೇದಿಕೆಯಲ್ಲಿ ಮಾಗಡಿ ಕ್ಷೇತ್ರದ ಜೆಡಿಎಸ್​ ಶಾಸಕ ಮಂಜುನಾಥ್ ಅವರು 2 ಲಕ್ಷ ರೂ. ದೇಣಿಗೆ ನೀಡಿದರು.

ದೇಣಿಗೆ ನೀಡಿದ ಡಾ.ಅಶ್ವಥ ನಾರಾಯಣ್ ಮತ್ತು ಮಂಜುನಾಥ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅಭಿನಂದಿಸಿತು. ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಮತ್ತಿಕೆರೆ ಜಯರಾಂ, ರಾಮನಗರ ಜಿಲ್ಲಾಧ್ಯಕ್ಷ ಸೂರ್ಯ ಪ್ರಕಾಶ್, ಕಾರ್ಯದರ್ಶಿ ಶಿವರಾಜು, ರಾಜ್ಯ ಸಮಿತಿ ಸದಸ್ಯ ಸಿದ್ದಲಿಂಗೇಗೌಡ ಮತ್ತಿತರರು ಹಾಜರಿದ್ದರು.
ಊರಿಗೆ ಹೋಗ್ಬೇಕಿತ್ತು.. ಅದ್ಕೆ ರಸ್ತೆಬದಿ ನಿಂತಿದ್ದ ಬಸ್​ ಓಡಿಸಿಕೊಂಡು ಬಂದೆ… ಈತನ ಮಾತು ಕೇಳಿ ಮಾಲೀಕ ದಿಗ್ಭ್ರಾಂತ

ಹುಟ್ಟಿನಿಂದ ಕಷ್ಟದಲ್ಲೇ ಬೆಳೆದ ಬಾಲೆಯ ಮೊಗದಲ್ಲಿ ನಗು ಅರಳಿಸಿದ ದಾವಣಗೆರೆ ಎಸ್ಪಿ! ಈ ಸ್ಟೋರಿ ಕೇಳಿದ್ರೆ ಭಾವುಕರಾಗ್ತೀರಿ

ಸಿದ್ದರಾಮಯ್ಯ ಕೊಟ್ಟ ಪರಿಹಾರದ ಹಣ ಎಸೆದು ಮುಸ್ಲಿಂ ಮಹಿಳೆ ಆಕ್ರೋಶ! ಸಿದ್ದುಗೆ ಮುಖಭಂಗ, ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − six =
Remember me
