ಚಿಕ್ಕಬಳ್ಳಾಪುರ:ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಲ್ಲ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳೂ ಶಾಲಾ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.
ಕೈವಾರ ತಾತಯ್ಯ ಜಯಂತ್ಯುತ್ಸವದಲ್ಲಿ ಭಾನುವಾರ ಮಾತನಾಡಿದ ಸುಧಾಕರ್​, ಹೈಕೋರ್ಟ್ ಆದೇಶವನ್ನು ನಾವೆಲ್ಲರೂ ಪಾಲನೆ ಮಾಡಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನಕ್ಕೆ ನಾವೆಲ್ಲರೂ ಗೌರವ ನೀಡಬೇಕಿದೆ. ಶಾಲೆಗಳಲ್ಲಿನ ಸಮಾನ ಮನಸ್ಥಿತಿ, ಸಮಾನ ಮನೋಭಾವ ಹಾಗೇ ಇರಬೇಕು. ಪರೀಕ್ಷೆಯನ್ನು ಚೆನ್ನಾಗಿ ಬರೆದು ಉತ್ತಮ ಅಂಕ ಗಳಿಸಿ. ನಮ್ಮ ನಾಡು ಶಾಂತಿಯ ತೋಟ ಎಂದು ಕುವೆಂಪು ಹೇಳಿದ್ದಾರೆ. ಶಾಂತಿಯ ತೋಟಕ್ಕೆ ನೀವೆಲ್ಲರೂ ಪ್ರೇರಣೆ ಆಗಬೇಕು. ಜಾತ್ಯಾತೀತವಾಗಿ, ಧರ್ಮಾತೀತವಾಗಿ ನಮ್ಮ ಸರ್ಕಾರ ನಿಮ್ಮ ಜತೆಗೆ ಇದೆ ಎಂದರು.
ನಾಳೆಯಿಂದ(ಮಾ.28) ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದೆ. ಎಲ್ಲ ವಿದ್ಯಾರ್ಥಿಗಳೂ ಸಮವಸ್ತ್ರ ಧರಿಸಿಯೇ ಎಕ್ಸಾಂಗೆ ಹಾಜರಾಗಬೇಕು. ಹಿಜಾಬ್​ ಧರಿಸಿ ಬಂದವರಿಗೆ ಪರೀಕ್ಷೆಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮಾ.28ರಿಂದ ಎಸ್ಸೆಸ್ಸೆಲ್ಸಿ ಎಕ್ಸಾಂ: ಹಿಜಾಬ್​ ಧರಿಸಿ ಬಂದ್ರೆ ಪರೀಕ್ಷೆಗಿಲ್ಲ ಅವಕಾಶ

ಮಹಿಳೆಯ ಕಾಟ ಸಹಿಸಲಾಗದೆ ಯುವಕ ಆತ್ಮಹತ್ಯೆ: ಸಾವಿಗೂ ಮುನ್ನ ಆತ ಮಾಡಿಟ್ಟ ವಿಡಿಯೋದಲ್ಲಿದೆ ರಹಸ್ಯ

ಕುಡಿದು ಸಿಟ್ಟಿನಿಂದ ಸಿಎಂಗೆ ಬೈದಿದ್ದೀನಿ… ದಯವಿಟ್ಟು ಕ್ಷಮಿಸಿ: ಶಾಬಾಜ್​ ಉಲ್ಲಾಖಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − nine =
Remember me
