ಬೆಂಗಳೂರು:‘108 -ಆಂಬುಲೆನ್ಸ್ ಸೇವೆಗಳ ಸಹಾಯವಾಣಿ’ಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಪೂರಕ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಜನರು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ತುರ್ತುಪರಿಸ್ಥಿತಿಯ ಆಪದ್ಬಾಂಧವ ಎನಿಸಿಕೊಂಡಿರುವ ಆಂಬುಲೆನ್ಸ್​ ಸೇವೆಯು ರಾಜ್ಯಾದ್ಯಂತ ನಿನ್ನೆ (ಶನಿವಾರ) ರಾತ್ರಿಯಿಂದಲೇ ಸೇವೆ ಸ್ಥಗಿತವಾಗಿತ್ತು. ಸಹಾಯವಾಣಿ ನಂಬರ್​ 108ಕ್ಕೆ ಕರೆ ಮಾಡಿದರೆ ಯಾರೂ ಸ್ವೀಕರಿಸುತ್ತಿಲ್ಲ. ಈ ಬಗ್ಗೆ ಜನರು ಆತಂಕಗೊಂಡಿದ್ದಾರೆ. ಈ ಪ್ರಕರಣ ಕುರಿತು ಪ್ರತಿಕ್ರಿಯಿಸಿದರು ಸಚಿವ ಸುಧಾಕರ್​, ಐಟಿ ಹಾರ್ಡ್‌ವೇರ್‌ನಲ್ಲಿ ಸಮಸ್ಯೆ ಸೃಷ್ಟಿಯಾಗಿದ್ದು, ಅದನ್ನು ಗುತ್ತಿಗೆ ಪಡೆದುಕೊಂಡಿರುವ GVK-EMRI ಸಂಸ್ಥೆ ಶೀಘ್ರದಲ್ಲೇ ಬಗೆಹರಿಸಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು ಅನ್ನುವ ನಿಟ್ಟಿನಲ್ಲಿ ಇಲಾಖೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. 108 -ಸಹಾಯವಾಣಿ ಕರೆಗಳು ಆಟೋಮ್ಯಾಟಿಕ್ ಆಗಿ ಕರೆಗಳನ್ನು ಸ್ವೀಕರಿಸಿ 2 ನಿಮಿಷಗಳಲ್ಲಿ ಆಂಬುಲೆನ್ಸ್ ವಾಹನ ಹಂಚಿಕೆ ಕಾರ್ಯ ಮಾಡುತ್ತಿತ್ತು. ತಾಂತ್ರಿಕ ಸಮಸ್ಯೆಯಿಂದ ಈಗ ಈ ಪ್ರಕ್ರಿಯೆಗೆ 6 ರಿಂದ 7 ನಿಮಿಷಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ. ಪ್ರತಿದಿನ 7 ರಿಂದ 8 ಸಾವಿರ ಕರೆಗಳ ಬದಲು 2 ರಿಂದ 2.5 ಸಾವಿರ ಕರೆಗಳನ್ನು ಮಾತ್ರ ಸ್ವೀಕರಿಸಲು ಸಾಧ್ಯವಾಗುತ್ತಿದೆ ಎಂದು ವಿವರಿಸಿದ್ದಾರೆ.
ಈಗಾಗಲೇ ಎಲ್ಲ ಆಸ್ಪತ್ರೆಗಳಿಗೆ ಇಂಟರ್ ಫೆಸಿಲಿಟಿ ಟ್ರಾನ್ಸ್‌ಫರ್‌ಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಆಂಬುಲೆನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಗೂ ಕರೆ ಬಂದರೆ ಸ್ವೀಕರಿಸಿ ಅಗತ್ಯ ಸೇವೆಗಳನ್ನು ಮಾಡಬೇಕೆಂದು ಸೂಚಿಸಲಾಗಿದೆ. ಮ್ಯಾನ್ಯುವಲ್ ಐಡಿಗಳನ್ನು ಕ್ರಿಯೇಟ್ ಮಾಡಿ ಆ ಮೂಲಕವೂ ಜನರಿಗೆ ತುರ್ತು ಸೇವೆ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ತುರ್ತು ಸೇವೆ ಒದಗಿಸುವ 112 ಸಹಾಯವಾಣಿಯಲ್ಲಿರುವ 2-3 ಸಿಬ್ಬಂದಿ ಬದಲು ಅಲ್ಲಿಗೆ 7-8 ಸಿಬ್ಬಂದಿ ನಿಯೋಜನೆ ಮಾಡಲು ಸೂಚಿಸಲಾಗಿದೆ. ಈ ಮೂಲಕ 108 ಸಹಾಯವಾಣಿಯ ತಂಡದ ಮುಖ್ಯಸ್ಥರಿಗೆ ಕರೆಗಳನ್ನು ಡೈವರ್ಟ್ ಮಾಡಿ ಆ ಮೂಲಕ ಮ್ಯಾನ್ಯುವಲ್ ಐಡಿ ಜನರೇಟ್ ಮಾಡಿ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಜತೆಗೆ 104- ಸಹಾಯವಾಣಿಯನ್ನು ಕೂಡ ಬಳಸಿಕೊಂಡು 108 ಸಹಾಯವಾಣಿ ಮೇಲಿನ ಒತ್ತಡ ಕಡಿಮೆ ಮಾಡಲಾಗುತ್ತಿದೆ. ಮಿಸ್ಡ್ ಕಾಲ್‌ಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದ್ದು, 108 ಸಹಾಯವಾಣಿಯಲ್ಲಿರುವ ಏಜೆಂಟ್‌ಗಳ ಸಂಖ್ಯೆಯನ್ನೂ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾತ್ರಿಯಿಂದ ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ: ಜನರ ಪರದಾಟ

ಅಪಘಾತದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿ ಮೃತ್ಯು: ಸಾವಲ್ಲೂ ಸಾರ್ಥಕತೆ ಮೆರೆದ ಪ್ರತಿಭಾವಂತ

ಬಡತನ ಮೆಟ್ಟಿ ನಿಲ್ಲಬೇಕು ಅನ್ನುವಷ್ಟರಲ್ಲಿ ಆಟವಾಡಿದ ವಿಧಿ… ಸಾವಲ್ಲೂ ಸಾರ್ಥಕತೆ ಮೆರದ ಪಿಯು ವಿದ್ಯಾರ್ಥಿನಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
