ಶಿವಮೊಗ್ಗ:ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ ‘ತಲೆದಂಡ’ಕ್ಕೆ ಒತ್ತಡ ಹೆಚ್ಚತೊಡಗಿದೆ. ಇದರ ಬೆನ್ನಲ್ಲೇ ಸಚಿವ ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಹಿನ್ನೆಲೆ ಮೈಸೂರಿನಿಂದ ಶಿವಮೊಗ್ಗಕ್ಕೆ ಈಶ್ವರಪ್ಪ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಆಗಮಿಸುವ ಸಾಧ್ಯತೆ ಇದೆ. ಬಳಿಕ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂತೋಷ್ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಂತೋಷ್​ ಸಾವಿನ ಸುದ್ದಿ ಬಂದ ಬೆನ್ನಲ್ಲೇ ನಿನ್ನೆ(ಮಂಗಳವಾರ) ಈಶ್ವರಪ್ಪ ಹೇಳಿದ್ದರು. ಅತ್ತ ಸಂತೋಷ್​​ ಸಾವಿಗೆ ಈಶ್ವರಪ್ಪ ಕಾರಣ. ಅವರನ್ನು ಬಂಧಿಸೋವರೆಗೂ ಅಂತ್ಯಕ್ರಿಯೆ ಮಾಡಲ್ಲ ಎಂದು ಮೃತನ ಕುಟುಂಬ ಪಟ್ಟು ಹಿಡಿದೆ.
ಸಂತೋಷ್​ ಸಾವಿಗೆ ನ್ಯಾಯ ಕೊಡಿ, ಸರ್ಕಾರಕ್ಕೆ ಮಾನ ಮರ್ಯಾದೆ ಇದ್ರೆ ಕೂಡಲೇ ಈಶ್ವರಪ್ಪರ ರಾಜೀನಾಮೆ ಪಡೆಯಬೇಕು ಎಂದು ವಿಪಕ್ಷ ಆಗ್ರಹಿಸಿದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಈಶ್ವರಪ್ಪ ಕರೆದಿರುವ ಸುದ್ದಿಗೋಷ್ಠಿ ಭಾರೀ ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಘೋಷಿಸುತ್ತಾರಾ? ಎಂಬ ಪ್ರಶ್ನೆಯೂ ಮೂಡಿದೆ.
ಈಶ್ವರಪ್ಪಗೆ ಆತ್ಮಹತ್ಯೆ ಸಂಕಷ್ಟ: ಕಮಿಷನ್ ಆರೋಪ ಮಾಡಿದ್ದ ವ್ಯಕ್ತಿ ಸಾವು, ಬಿಜೆಪಿಗೆ ಇಕ್ಕಟ್ಟು

ಕರ್ನಾಟಕದ ಮಗಳು ಆಂಧ್ರ ಸಚಿವೆ! ಜಗನ್​ಮೋಹನ್​ ರೆಡ್ಡಿ ಸಂಪುಟದಲ್ಲಿ ತಾಯಕನಹಳ್ಳಿಯ ಉಷಾ ದರ್ಬಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 8 =
Remember me
