ಶಿವಮೊಗ್ಗ/ಬೆಂಗಳೂರು:ಇಷ್ಟು ದಿನ ಸುಮ್ಮನಿದ್ದ ಮುಸಲ್ಮಾನ ಗೂಂಡಾಗಳು ಶಿವಮೊಗ್ಗದಲ್ಲಿ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಹಿಂದೂ ಸಂಘಟನೆಯ ಹರ್ಷನನ್ನು ಹತ್ಯೆ ಮಾಡಿದ್ದಾರೆ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಹಿಜಾಬ್​ ವಿವಾದ ಕುರಿತು ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕೊಟ್ಟ ಪ್ರಚೋಧನಾಕಾರಿ ಹೇಳಿಕೆ ಮುಸಲ್ಮಾನ್​ ಗೂಂಡಾಗಳಿಗೆ ಕುಮ್ಮಕ್ಕು ನೀಡಿದೆ. ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ. ಯಾವುದೇ ಕಾರಣಕ್ಕೂ ನಾವು ಆರೋಪಿಗಳನ್ನ ಬಿಡೋದಿಲ್ಲ. ಪೊಲೀಸರು ಬಂಧಿಸುತ್ತಾರೆ. ಕೊಲೆಯಾದ ಹರ್ಷ ಉತ್ತಮ ಸಂಸ್ಕಾರ, ನಡವಳಿಕೆಯುಳ್ಳ ಯುವಕ. ಇನ್ನೂ ಮದುವೆ ಆಗಿರಲಿಲ್ಲ. ಹರ್ಷನ ಹತ್ಯೆಯನ್ನ ಸಹಿಸಲು ಸಾಧ್ಯವಿಲ್ಲ. ಆರೋಪಿಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ ಬಂಧಿಸಲು ಪೊಲೀಸರಿಗೆ ಸೂಚಿಸಿರುವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಅತ್ತ ಈಶ್ವರಪ್ಪರ ಆರೋಪಕ್ಕೆ ತಿರುಗೇಟು ಕೊಟ್ಟ ಡಿಕೆಶಿ, ಸಿದ್ದರಾಮಯ್ಯನವರು ಹೇಳಿರುವಂತೆ ಈಶ್ವರಪ್ಪನ ಮಿದುಳಿಗೂ ನಾಲಿಗೆಗೂ ಸಂಪರ್ಕವೇ ಇಲ್ಲ ಎಂದು ಟೀಕಿಸಿದ್ದಾರೆ.
ಈ ಕೊಲೆಗೂ- ಹಿಜಾಬ್ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ. ಈ ಹತ್ಯೆ ಯಾಕಾಗಿದೆ ಎಂದು ಪೊಲೀಸ್ ಅಧಿಕಾರಿಗಳೇ ಹೇಳಬೇಕು. ಆದರೆ ಸಾಮಾನ್ಯ ಪರಿಜ್ಞಾನವೂ ಇಲ್ಲದೆ ಆತ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದ ಡಿಕೆಶಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಶಿವಮೊಗ್ಗ ಜನತೆ ಶಾಂತಿ ಕಾಪಾಡಬೇಕು ಎಂದಿದ್ದಾರೆ.
ದಯವಿಟ್ಟು ಶಿವಮೊಗ್ಗ ಜನತೆ ಶಾಂತಿ ಕಾಪಾಡಿ, ಮುಲಾಜಿಲ್ಲದೆ ಆರೋಪಿಗಳನ್ನ ಬಂಧಿಸ್ತೀವಿ: ಸಿಎಂ ಮನವಿ

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಅಂತಿಮ ಯಾತ್ರೆ ವೇಳೆ ಬೈಕ್​ಗೆ ಬೆಂಕಿ, ಮನೆಗಳಿಗೆ ಕಲ್ಲು ತೂರಾಟ

ಸ್ನಾನಕ್ಕೆ ಹೋದ್ರೆ ಇಣುಕಿ ನೋಡ್ತಾನೆ, ಲೈಂಗಿಕತೆ​ಗಾಗಿ ಪೀಡಿಸ್ತಾನೆ… ಸೊಸೆಗೆ ಮಾವ ಕೊಟ್ಟ ಕಾಟ ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + eight =
Remember me
