ಬೆಂಗಳೂರು:ಈಗ ಸಿದ್ದರಾಮೋತ್ಸವಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಮುಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂ ಒಂದು ಉತ್ಸವ ಆಚರಿಸಿಕೊಂಡರೂ ಅಚ್ಚರಿಯಿಲ್ಲ ಎಂದು ಸಚಿವ ಮುನಿರತ್ನ ಹೇಳಿದರು.
ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುನಿರತ್ನ, ಸಿದ್ದರಾಮೋತ್ಸವದ ಹಿಂದೆ ಚುನಾವಣಾ ರಾಜಕಾರಣವಿದೆ. ಖಂಡಿತವಾಗಿ ಬೇರೇನೂ ಅಲ್ಲ. ಸಿದ್ದರಾಮಯ್ಯ ಅವರಿಗೆ ಹುಟ್ಟಿದ ದಿನವೇ ಗೊತ್ತಿಲ್ಲ. ಸಿದ್ದರಾಮಣ್ಣ ಹುಟ್ಟಿದ ದಿನದ ಶುಭಾಶಯ ಅಂತ ಹೇಳಿದರೆ, ಏಯ್ ಹೋಗೋ ನನಗೆ ಹುಟ್ಟಿದ ದಿನವೇ ಗೊತ್ತಿಲ್ಲ ಅಂತಿದ್ದರು. ಆದರೀಗ ಇದ್ದಕ್ಕಿದ್ದಂತೆ ಆಗಸ್ಟ್ 3 ಅಂತಲೇ ಹೇಗೆ ತಿಳಿಯಿತೋ ಗೊತ್ತಿಲ್ಲ. ಈ ಹುಟ್ಟುಹಬ್ಬ ಅವರು ಮಾಡಿಕೊಳ್ಳುತ್ತಿರೋದಲ್ಲ. ಅವರ ಅಕ್ಕಪಕ್ಕದಲ್ಲಿ ಇರುವವರು ಮಾಡುತ್ತಿರುವುದು. ಅವರೆಲ್ಲಾ ಯಾರು ಅಂತ ನಿಮಗೆ(ಮಾಧ್ಯಮದವರು) ಗೊತ್ತು. ನೀವೇ ತಿಳಿದುಕೊಳ್ಳಿ ಎಂದರು.
ಸಿದ್ದರಾಮಯ್ಯ ಅವರಂತೆ ನಾನು ಬೇರೊಂದು ಪಕ್ಷ ತೊರೆದು ಬಿಜೆಪಿಗೆ ಬಂದಿರುವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಇದೆಲ್ಲ ಸಹಜ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿಯೇ ಇರುವೆ. ಪಕ್ಷ ಎಲ್ಲವನ್ನೂ ಕೊಟ್ಟು ಜನರ ಸೇವೆಗೆ ಅವಕಾಶ ಕಲ್ಪಿಸಿದ್ದು, ಬೇರೆ ಯೋಚನೆ ಬರುವುದಿಲ್ಲ. ಅಂತಹ ಪ್ರಶ್ನೆಗಳಿಗೆ ಉತ್ತರಿಸಲು ಬಯಸುವುದಿಲ್ಲ ಎಂದು ಮುನಿರತ್ನ ಹೇಳಿದರು.
ದಾಂಡೇಲಿಯಲ್ಲಿ ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಒಂದೇ ದಿನ 2 ಬಾರಿ ಬಲತ್ಕಾರ

ಕಾರು ಹೊಳೆಗೆ ಬಿದ್ದ ಪ್ರಕರಣ: ನಾಪತ್ತೆಯಾಗಿದ್ದ ಯುವಕರಿಬ್ಬರು ಶವವಾಗಿ 3 ದಿನದ ಬಳಿಕ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
