ಬೆಂಗಳೂರು:ನವೋದಯ ಆ್ಯಪ್ ಮೂಲಕ ವಿವಿಧ ಪಿಂಚಣಿ ಯೋಜನೆಗಳಡಿ ಫಲಾನುಭವಿಗಳ ದತ್ತಾಂಶ ಸಂಗ್ರಹ, ಆಧಾರ್ ಸಂಖ್ಯೆಗೆ ಜೋಡಿಸಿದ್ದರಿಂದ ರಾಜ್ಯದಲ್ಲಿ ಈವರೆಗೆ‌ 3.58 ಲಕ್ಷ ಬೋಗಸ್ ಫಲಾನುಭವಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿದ್ದರಿಂದ ರಾಜ್ಯದ ಬೊಕ್ಕಸಕ್ಕೆ 430 ಕೋಟಿ ರೂ. ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ದಲ್ಲಾಳಿಗಳ ಬಳಿ ಮಾಸಾಶನ ಮಂಜೂರು ಆದೇಶಪತ್ರಗಳು, ಒಬ್ಬರಿಗೆ ಎರಡೆರಡು ಪಿಂಚಣಿ, ಸತ್ತವರಿಗೂ ಪಾವತಿಯಾಗಿರುವುದು ಬಯಲಾಗಿದೆ ಎಂದು ತಿಳಿಸಿದರು.
ಅರ್ಹರ ಮನೆ ಬಾಗಿಲಿಗೆ ಸಾಮಾಜಿಕ‌ ಭದ್ರತಾ ಯೋಜನೆಯಡಿ ಒಂಭತ್ತು ಪಿಂಚಣಿ ತಲುಪಿಸುವ ವ್ಯವಸ್ಥೆ ಜಾರಿಗೆ ಬಂದ ನಂತರ 43000 ಜನರಿಗೆ ಮಂಜೂರು ಮಾಡಲಾಗಿದೆ. ಇದೀಗ ಹೊಸ ತಂತ್ರಾಂಶ ಅಭಿವೃದ್ಧಿ ಪಡಿಸಿದ್ದು, ಹಲೋ ಕಂದಾಯ ಸಚಿವರೆ ಎಂದು ಸಹಾಯವಾಣಿಗೆ ಕರೆ ಮಾಡಿದರೆ ಸಾಕು, ಅರ್ಹರಿಗೆ ಮೊಬೈಲ್ ಮುಖೇನ ಮಂಜೂರು ಆದೇಶ ತಲುಪಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಇಷ್ಟರಲ್ಲೇ ಚಾಲನೆ ನೀಡಲಿದ್ದು, ಇದೇ ಸಂದರ್ಭದಲ್ಲಿ ಸಹಾಯವಾಣಿ ಸಂಖ್ಯೆ ಪ್ರಕಟಿಸಲಾಗುವುದು ಎಂದು ಆರ್.ಅಶೋಕ್ ಹೇಳಿದರು.
ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಬಿಜೆಪಿಗೆ ಬರ್ಬೇಕು ಅಂದ್ರೆ ಈ 3 ಷರತ್ತಿಗೆ ಒಪ್ಪಬೇಕು… ಸುಮಲತಾರ ಡಿಮಾಂಡ್​ಗೆ ಬೆಚ್ಚಿಬಿದ್ದಿದೆಯಂತೆ ಬಿಜೆಪಿ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:three + 12 =
Remember me
