ಬೆಂಗಳೂರು:ಕರೊನಾ ಸೋಂಕಿಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯಾಗಿಲ್ಲ. ಈ ಸಂಬಂಧ ಇಲ್ಲದ ಕಥೆ ಕಟ್ಟುವುದು ಬೇಡ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದರು.
ವಿಕಾಸ ಸೌಧದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಮಣಿಪಾಲ್ ಹಾಗೂ ಅಪೋಲೋ ಆಸ್ಪತ್ರೆಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ದಾಖಲಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ನಾನೇ ಖುದ್ದಾಗಿ ಅವರೊಂದಿಗೆ ಮಾತನಾಡಿರುವೆ, ನಿರಂತರ ಸಂಪರ್ಕದಲ್ಲಿರುವೆ ಎಂದರು.
ಮಾಜಿ ಸಿಎಂ ಎಚ್​ಡಿಕೆಗೆ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲವೆಂದು ಜೆಡಿಎಸ್ ಮುಖಂಡರೇ ಹೇಳಿದ್ದಾರೆ ಎಂದು ಪತ್ರಕರ್ತರು ಗಮನಸೆಳೆದಾಗ ಸುಧಾಕರ್ ಕೇಳಿಯೂ ಕೇಳಿಸಿಕೊಳ್ಳದವರಂತೆ ಹೊರಟುಬಿಟ್ಟರು.
ಇತ್ತ ಹಲಗೆ ವಡೆರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ವಿಡಿಯೋ ಕಾನ್ಫರೆನ್ಸ್​ ಮೂಲಕವೇ ಖಾಸಗಿ ಹೋಟೆಲ್​ನಿಂದ ಕೋರ್ಟ್​ನ ವಿಚಾರಣೆಗೆ ಕುಮಾರಸ್ವಾಮಿ ಹಾಜರಾದರು. ಇಂದು ವಿಚಾರಣೆಗಾಗಿ ಕೋರ್ಟ್​ಗೆ ಎಚ್​ಡಿಕೆ ಹಾಜರಾಗಬೇಕಿತ್ತು. ಕರೊನಾ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರ್​ ಆಗಿದ್ದರು. ಮುಂದಿನ ತಿಂಗಳಿಗೆ ವಿಚಾರಣೆ ಮುಂದೂಡಿ ಕೋರ್ಟ್​ ಆದೇಶಿಸಿದೆ.
ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಸಾರಿಗೆ ಬಸ್​ ಚಾಲಕನ ಹತ್ಯೆ ಪಕ್ಕಾ ಪ್ಲಾನ್ಡ್! ಇದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ… ಬೆಚ್ಚಿಬೀಳಿಸುತ್ತೆ ನಿನ್ನೆ ನಡೆದ ಘಟನೆ

ಸಾರಿಗೆ ಬಸ್​ ಸಂಚಾರ ಆರಂಭ, ನಿಟ್ಟುಸಿರುಬಿಟ್ಟ ಪ್ರಯಾಣಿಕರು

ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
