ಶನಿವಾರಸಂತೆ:“ನೀನು ನನ್ನನ್ನು ಪ್ರೀತಿಸಬೇಕು, ಇಲ್ಲದಿದ್ದರೆ ಕೊಲೆ ಮಾಡುತ್ತೇನೆ” ಎಂದು ಹಿಂದೂ ಧರ್ಮದ ಅಪ್ರಾಪ್ತೆಗೆ ಬೆದರಿಕೆ ಹಾಕಿದ್ದ ಅನ್ಯ ಕೋಮಿನ ಯುವಕನನ್ನು ಶುಕ್ರವಾರ ಶನಿವಾರಸಂತೆ ಪೊಲೀಸರು ಬಂಧಿಸಿದ್ದಾರೆ.
ಸಲ್ಮಾನ್​ ಎಂಬಾತ ಬಂಧಿತ ಆರೋಪಿ. ಈತ ಶನಿವಾರಸಂತೆಯಲ್ಲಿ ಡಾನ್ಸ್​ ತರಗತಿ ನಡೆಸುತ್ತಿದ್ದು, ಎರಡು ವರ್ಷಗಳ ಹಿಂದೆ ಬಾಲಕಿ ಡಾನ್ಸ್​ ತರಗತಿಗೆ ಹೋಗುತ್ತಿದ್ದಳು. ನಂತರ ತರಗತಿಗೆ ಹೋಗುವುದನ್ನು ನಿಲ್ಲಿಸಿದ್ದಳು. ಈ ನಡುವೆ, ಅಪ್ರಾಪ್ತ ಹುಡುಗಿಗೆ ಕರೆ ಮಾಡಿದ ಸಲ್ಮಾನ್​, “ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ, ತಕ್ಷಣ ಡಾನ್ಸ್​ ತರಗತಿಗೆ ಬಾ” ಎಂದು ಒತ್ತಾಯಪೂರ್ವಕವಾಗಿ ಕರೆಸಿಕೊಂಡಿದ್ದಾನೆ. ನಂತರ, “ನೀನು ನನ್ನನ್ನು ಪ್ರೀತಿಸಬೇಕು. ಇಲ್ಲದಿದ್ದರೆ ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ. ಇದನ್ನು ತಿಳಿದ ಹಿಂದುಪರ ಸಂಘಟನೆ ಕಾರ್ಯಕರ್ತರು ಡಾನ್ಸ್​ ತರಗತಿಗೆ ತೆರಳಿ ಅಲ್ಲೇ ಇದ್ದ ಯುವಕ ಮತ್ತು ಅಪ್ರಾಪ್ತೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಡಾನ್ಸ್​ ಕಲಿಸುವುದಾಗಿ ಸಲ್ಮಾನ್​ ತಮ್ಮ ಪುತ್ರಿಯನ್ನು ತರಗತಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ಪಾಲಕರು ದೂರು ನೀಡಿದ್ದಾರೆ. ಈ ಸಂಬಂಧ ಶನಿವಾರಸಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೇದೆ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್: ಇಬ್ಬರು ಪತ್ರಕರ್ತರು, ASI ವಿರುದ್ಧ ಎಫ್​ಐಆರ್​! ಡೆತ್​ನೋಟಲ್ಲಿದೆ ಸ್ಫೋಟಕ ರಹಸ್ಯ

ಇದು JAMES ರಹಸ್ಯ: ನಿಮ್ಮ ಕಣ್ಣಲ್ಲಿ ನೀರು ತರಿಸುತ್ತೆ ಶೈನ್​ ಶೆಟ್ಟಿ ಬಿಚ್ಚಿಟ್ಟ ರೀಲ್​ ಮತ್ತು ರಿಯಾಲಿಟಿ

ಅಪ್ಪು ನೆನಪಲ್ಲಿ ಮತ್ತೆ ಒಳ್ಳೆಯ ಕೆಲಸ ಮಾಡಿದ ಕಾಲಿವುಡ್ ಸೂಪರ್ ಸ್ಟಾರ್ ವಿಶಾಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 13 =
Remember me
