ಬೆಂಗಳೂರು:ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಾಲಕನೊಬ್ಬನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ.
ಪ್ರಕರಣ ರದ್ದು ಕೋರಿ ಆರೋಪಿ ಬಾಲಕನ ಪರವಾಗಿ ಆತನ ತಂದೆ ಸಲ್ಲಿಸಿದ್ದ ಕ್ರಿಮಿನಲ್​ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಪ್ರಕಟಿಸಿದೆ. ಸಂತ್ರಸ್ತೆ ಹಾಗೂ ಆರೋಪಿಯ ಪೋಷಕರು ರಾಜಿ ಮಾಡಿಕೊಂಡಿರುವುದನ್ನು ಪರಿಗಣಿಸಿ ಹಾಗೂ ಆರೋಪಿಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆತನ ವಿರುದ್ಧದ ಕ್ರಿಮಿನಲ್​ ಕೇಸ್​ ರದ್ದುಪಡಿಸಿ ಆದೇಶಿಸಿದೆ.
ಪ್ರಕರಣವೇನು?:ಕಳೆದ ವರ್ಷ ನ.21ರಂದು ಕಾಲೇಜಿಗೆ ತೆರಳಿದ್ದ ಪುತ್ರಿ ಮನೆಗೆ ಮರಳಿಲ್ಲ ಎಂದು ಅಪ್ರಾಪ್ತೆಯ ತಂದೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಆರೋಪಿ ಮತ್ತು ಸಂತ್ರಸ್ತೆಯ ಫೋನ್​ ಟ್ರ್ಯಾಕ್​ ಮಾಡಿ ಇಬ್ಬರನ್ನೂ ಪತ್ತೆ ಹಚ್ಚಿದ್ದರು. ಬಳಿಕ, ಆರೋಪಿ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್​ 5 ಮತ್ತು 6, ಐಪಿಸಿ ಸೆಕ್ಷನ್​ 376, 363 ಅಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದರು. ಈ ಮಧ್ಯೆ, ಆರೋಪಿ ಹಾಗೂ ಸಂತ್ರಸ್ತೆಯ ಪಾಲಕರು ಪರಸ್ಪರ ರಾಜಿಯಾಗಿ, ಪ್ರಕರಣಕ್ಕೆ ಅಂತ್ಯ ಹಾಡಲು ಬಯಸಿದ್ದರು. ಇದರಿಂದ, ಪೋಕ್ಸೋ ಪ್ರಕರಣದ ವಿಚಾರಣೆ ರದ್ದುಪಡಿಸುವಂತೆ ಕೋರಿ ಬಾಲಕನ ತಂದೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ಹಲವು ಸುತ್ತಿನ ಕೌನ್ಸೆಲಿಂಗ್​ ಬಳಿಕ ಆರೋಪಿ ಮತ್ತು ಸಂತ್ರಸ್ತೆಯ ಕುಟುಂಬದವರು ಪ್ರಕರಣವನ್ನು ಸುಖಾಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಅಪ್ರಾಪ್ತರಿಬ್ಬರ ಭವಿಷ್ಯದ ದೃಷ್ಟಿಯಿಂದ ಪ್ರಕರಣ ಮುಂದುವರಿಸದಿರುವ ನಿರ್ಧಾರಕ್ಕೆ ಬಂದಿದ್ದಾರೆ. ಆದ್ದರಿಂದ, ತನಿಖಾ ಪ್ರಕ್ರಿಯೆ ಕೈಬಿಡಲು ಆದೇಶಿಸಬೇಕು ಎಂದು ಬಾಲಕ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.
ಪ್ರೀತಿಯಲ್ಲಿ ಬಿದ್ದವರ ಶಿಕ್ಷಿಸುವುದು ಪೋಕ್ಸೋ ಉದ್ದೇಶವಲ್ಲ:ಸಂತ್ರಸ್ತೆ ಮತ್ತು ಆರೋಪಿಯ ಪೋಷಕರ ನಡುವೆ ಸಂಧಾನ ಏರ್ಪಟ್ಟಿದೆ. ಒಂದೇ ತರಗತಿಯಲ್ಲಿ ಓದುತ್ತಿದ್ದ ಆರೋಪಿ ಹಾಗೂ ಸಂತ್ರಸ್ತೆ ಸ್ನೇಹಿತರಾಗಿದ್ದು, ಪರಸ್ಪರರ ಮೇಲೆ ಮೂಡಿದ್ದ ಆಕರ್ಷಣೆಯಿಂದ ಈ ಕೃತ್ಯ ನಡೆದಿದೆ. ಪ್ರೀತಿಯಲ್ಲಿ ಬಿದ್ದಿದ್ದ ಇಬ್ಬರೂ ಮನೆಬಿಟ್ಟು ಚಿಕ್ಕಮಗಳೂರಿಗೆ ತೆರಳಿದ್ದರು. ಸಂತ್ರಸ್ತೆಯೊಂದಿಗೆ ಪ್ರೀತಿಯಲ್ಲಿರುವ ಆರೋಪಿಯನ್ನು ಶಿಕ್ಷಿಸುವುದು ಪೋಕ್ಸೋ ಕಾಯ್ದೆಯ ಉದ್ದೇಶವಲ್ಲ ಎಂದು ಈಗಾಗಲೇ ಹಲವು ನ್ಯಾಯಾಲಯಗಳು ಆದೇಶಿಸಿವೆ. 10ರಿಂದ 19 ವರ್ಷಗಳ ನಡುವಿನ ಹದಿಹರೆಯ ಮಗು ಯವ್ವನ ಅಥವಾ ವಯಸ್ಕ ಹಂತಕ್ಕೆ ರೂಪಾಂತರವಾಗುವ ಸಮಯವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ತಮ್ಮ ನಡವಳಿಕೆಯಿಂದ ಮುಂದಾಗುವ ಪರಿಣಾಮಗಳನ್ನು ಮಕ್ಕಳು ನಿರ್ಲಕ್ಷಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳು ಪೋಕ್ಸೋ ಪ್ರಕರಣಗಳಿಗೆ ಸಿಲುಕಿ, ಗಂಭೀರ ಪರಿಣಾಮ ಎದುರಿಸುತ್ತಾರೆ ಎಂದು ಹೈಕೋರ್ಟ್​ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.
ಭವಿಷ್ಯಕ್ಕೆ ತೊಂದರೆ:ಆರೋಪಿ ಬಾಲಕನ ಅಂಕಪಟ್ಟಿಗಳನ್ನು ಪರಿಶೀಲಿಸಿದರೆ, ಆತ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಾನೆ. ಸಂತ್ರಸ್ತೆ ಹಾಗೂ ಆರೋಪಿಯ ಪಾಲಕರೇ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಳ್ಳಲು ನಿರ್ಧರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಿ ನಿರ್ಧಾರವನ್ನು ಒಪ್ಪಿಕೊಂಡು ಆರೋಪಿಯನ್ನು ಪ್ರಕರಣದಿಂದ ಮುಕ್ತಿಗೊಳಿಸುವುದು ಸೂಕ್ತವಾಗಿದೆ. ಇಲ್ಲವಾದರೆ, ಆರೋಪಿಯ ಭವಿಷ್ಯಕ್ಕೆ ತೊಂದರೆಯಾಗಲಿದೆ. ಪ್ರಕರಣ ರಾಜಿಯಾಗಿರುವ ಹಿನ್ನೆಲೆಯಲ್ಲಿ ಬಾಲಕನನ್ನು ಪೋಕ್ಸೋ ಕಾಯ್ದೆಯಡಿ ವಿಚಾರಣೆಗೆ ಗುರಿಪಡಿಸುವುದರಿಂದ ಯಾವುದೇ ಉಪಯೋಗವಿಲ್ಲ ಎಂಬ ನಿರ್ಧಾರಕ್ಕೆ ಬಂದಿರುವ ಹೈಕೋರ್ಟ್​, ಆರೋಪಿಯ ವಿರುದ್ಧದ ಪ್ರಕರಣ ರದ್ದುಪಡಿಸಿದೆ.
ಅರಿವಿನ ಕೊರತೆ:ಆಕರ್ಷಣೆಯ ಕಾರಣದಿಂದ ಹದಿಹರೆಯದ ಹುಡುಗ-ಹುಡುಗಿಯ ನಡುವೆ ಮೂಡುವ ಪ್ರೀತಿ ಹುಡುಗನನ್ನು ಪೋಕ್ಸೋ ಕಾಯ್ದೆಯ ನಿಯಮಗಳಡಿ ಇಕ್ಕಟ್ಟಿಗೆ ಸಿಲುಕಿಸುತ್ತದೆ. ಯಾವ ಉದ್ದೇಶಕ್ಕೆ ಪೋಕ್ಸೋ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂಬುದನ್ನು ಮರೆಯಲಾಗದು. ಆದರೆ, ಕಾನೂನಿನ ಪರಿಣಾಮಗಳ ಬಗೆಗಿನ ಅರಿವಿನ ಕೊರತೆಯಿಂದ ಹದಿಹರೆಯದವರು ಇಂತಹ ಕೃತ್ಯಗಳಲ್ಲಿ ಸಿಲುಕಿಕೊಳ್ಳುತ್ತಾರೆ. ಇದೂ ಸಹ ಅಂತಹದೇ ಪ್ರಕರಣವಾಗಿದೆ ಎಂದು ಕೋರ್ಟ್​ ಹೇಳಿದೆ.
ಅನೇಕ ಪ್ರಥಮಗಳ ಒಡತಿ ರಾಣಿ ಎಲಿಜಬೆತ್​! ಇಲ್ಲಿದೆ ಜೀವನಪಥ… ತನ್ನ ಅಜ್ಜಿ ವಿಕ್ಟೋರಿಯಾ ಹೆಸರಲ್ಲಿದ್ದ ದಾಖಲೆಯನ್ನೂ ಮುರಿದಿದ್ದರು

ಕಲಾತ್ಮಕ ಸಹಿಯ ಶಾಂತಯ್ಯ ಇನ್ನಿಲ್ಲ: ಸಾವಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಉಪನೋಂದಣಾಧಿಕಾರಿ

ಯುವತಿ ಜತೆ ಮೈಸೂರಿನ ಲಾಡ್ಜ್​ನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + seventeen =
Remember me
