ಮಂಗಳೂರು:ಇತ್ತ ಮನೆ ಮುಂದಿನ ಬಾವಿಗೆ ಹಾರಿ ಗಂಡ ಸತ್ತರೆ, ಅತ್ತ ಮನೆಯ ಮಹಡಿ ಮೇಲೆ ನೇಣುಬಿಗಿದುಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಬಳಿಯ ಪಿಂಟೋಸ್ ಲೇನ್​ನಲ್ಲಿ ಬುಧವಾರ ಸಂಭವಿಸಿದೆ.
ಸುರೇಶ್ (62) ಮತ್ತು ವಾಣಿ (55) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರ ಕುಟುಂಬಸ್ಥರು ಕೆಳ ಮಹಡಿಯಲ್ಲಿ ವಾಸ ಮಾಡುತ್ತಿದ್ದು, ಮೇಲಿನ ಮಹಡಿಯಲ್ಲಿ ದಂಪತಿ ವಾಸವಿದ್ದರು. ಇವರಿಬ್ಬರೂ ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್​ನೋಟ್​ ಪೊಲೀಸರ ಕೈಗೆ ಸಿಕ್ಕಿದೆ.ಇದನ್ನೂ ಓದಿರಿವರದಕ್ಷಿಣೆ ದಾಹಕ್ಕೆ ಸಿವಿಲ್ ಇಂಜಿನಿಯರ್ ಪತ್ನಿ ಬಲಿ! ಮದ್ವೆ ಆದ ದಿನದಿಂದ ಗಂಡ ಕೊಟ್ಟ ಕಿರುಕುಳ ಅಷ್ಟಿಷ್ಟಲ್ಲ
ಸುರೇಶ್ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಾಣಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಬಾವಿಯಿಂದ ಸುರೇಶ್ ಮೃತದೇಹ ತೆಗೆಯಲಾಗಿದೆ. ಡೆತ್​ ನೋಟ್​ನಲ್ಲಿ ಚಿಟ್ ಫಂಡ್ ನಷ್ಟದ ಬಗ್ಗೆ ಬರೆದು ದಂಪತಿ ಇಬ್ಬರೂ ಸಾವಿನ ಮನೆಯ ಕದ ತಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಇದನ್ನೂ ಓದಿರಿಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸ್​ ಕಮಿಷನರ್ ಶಶಿಕುಮಾರ್​ ಮಾತನಾಡಿ, ದಂಪತಿಗಳ ಆತ್ಮಹತ್ಯೆ ಕೆಟ್ಟ ನಿರ್ಧಾರ. ಚೀಟಿ ವ್ಯವಹಾರ, ಹಣಕಾಸು ಸಮಸ್ಯೆ ಇದ್ದಲ್ಲಿ ಹೇಳಿಕೊಳ್ಳಬಹುದಿತ್ತು. ಈ ಲಾಕ್​ಡೌನ್ ಸಮಯದಲ್ಲಿ ಸಾಕಷ್ಟು ಜನರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಮಧ್ಯೆ ಹಲವೆಡೆ ಹೆಚ್ಚಿನ ದರದಲ್ಲಿ ಬಡ್ಡಿ ವಸೂಲಿ ಮಾಡ್ತಿರೋದು ಗಮನಕ್ಕೆ ಬಂದಿದೆ. ಇಂಥವರ ವಿರುದ್ಧ ಎಕ್ಸೋರ್ಬಿಟಂಟ್ ರೇಟ್ ಆಫ್ ಇಂಟ್ರೆಸ್ಟ್ ಆ್ಯಕ್ಟ್​ನಡಿ‌ ಪ್ರಕರಣ ದಾಖಲಿಸಲು ಅವಕಾಶ ಇದೆ. ಅತಿಯಾದ ಬಡ್ಡಿ ವಸೂಲಿಗೆ ಒತ್ತಡ, ಬೆದರಿಕೆ ಹಾಕಿದಲ್ಲಿ ಸ್ಥಳೀಯ ಠಾಣೆಗೆ ದೂರು ನೀಡಿ. ಚೀಟಿ ವ್ಯವಹಾರ ಮಾಡುವ ಹಲವರು ಆತ್ಮಹತ್ಯೆ ಮಾಡಿಕೊಳ್ಳುವ ಇಲ್ಲವೇ ಊರು ಬಿಟ್ಟು ಹೋಗುವ ಕೆಲ ಮಾಡುತ್ತಿದ್ದಾರೆ. ಇಂಥಹ ರಿಸ್ಕ್ ತೆಗೆದುಕೊಳ್ಳದೆ ಸುರಕ್ಷಿತ ಹಣಕಾಸು ವ್ಯವಹಾರ ಮಾಡಿದ್ರೆ ಉತ್ತಮ. ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚಿನ ಬಡ್ಡಿ ವಸೂಲಿ ಕಂಡುಬಂದರೆ ದೂರು ಕೊಡಿ. ಸೂಕ್ತ ಕಾನೂನು ‌ಕ್ರಮಕ್ಕೆ ನಮ್ಮ ಎಲ್ಲ ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ ಎಂದರು.
ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ರೋಹಿಣಿ ಸಿಂಧೂರಿ ಮನೆಯ ವಿದ್ಯುತ್​ ಬಿಲ್​ ತಿಂಗಳಿಗೆ 50 ಸಾವಿರ ರೂ., ಈಜುಕೊಳಕ್ಕೆ ಕುಡಿವ ನೀರು ಬಳಕೆ…

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್​ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 1 =
Remember me
