ಬೆಂಗಳೂರು:ನೈಋತ್ಯ ಮಾನ್ಸೂನ್​( ಮುಂಗಾರು) ಮುಗಿಯಲು ತಿಂಗಳು ಬಾಕಿ ಇದೆ. ಈ ಬಾರಿ ವಾಡಿಕೆಯಂತೆ ಪ್ರವೇಶಿಸಿದ್ದ ಮುಂಗಾರು ಆಶಾದಾಯಕವಾಗಿದ್ದು, ಜೂನ್​ನಿಂದ ಆಗಸ್ಟ್​ವರೆಗೆ ವಾಡಿಕೆಗಿಂತ ಅಧಿಕ ಮಳೆಯಾಗಿದೆ.
ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ.ಆದರೂ, ಆ.1ರಿಂದ ಆ.24ರವರೆಗೆ ಕಲಬುರಗಿ, ಬೀದರ್​, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ದಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿ ಅಂಶಗಳಿಂದ ತಿಳಿದುಬಂದಿದೆ. ಸೆ.31ಕ್ಕೆ ಮುಂಗಾರು ಮುಗಿದು ಈಶಾನ್ಯ ಮಾನ್ಸೂನ್​ (ಹಿಂಗಾರು) ಶುರುವಾಗಲಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದಲ್ಲೆಡೆ ಸುರಿಯುತ್ತಿರುವ ಮಳೆ, ಕರಾವಳಿ, ಮಲೆನಾಡು ವ್ಯಾಪ್ತಿಯ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಇನ್ನಷ್ಟು ಬಿರುಸಾಗಿ ಸುರಿಯಲಿದೆ.
ರಾಜಕೀಯ ಒಳಸುಳಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ!
ಶಿವಮೊಗ್ಗದ ಆಗುಂಬೆ, ಯಾದಗಿರಿಯ ಬೀಮನರಾಯನಗುಡಿ, ಕೊಡಗಿನ ಗೋಣಿಕೊಪ್ಪ, ಚಿಕ್ಕಮಗಳೂರಿನ ಮೂಡಗೆರೆ ಮತ್ತು ಚಾಮರಾಜನಗರದ ಹರದನಹಳ್ಳಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಶುಕ್ರವಾರ ಧಾರಾಕಾರವಾಗಿ ವರ್ಷಧಾರೆಯಾಗಿದೆ.ದಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್​ನಲ್ಲಿ ಆ.31, ಸೆ.1ರಂದು ಭಾರಿ ಮಳೆ ಬೀಳುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ಕೊಟ್ಟಿದೆ. ಬೆಳಗಾವಿ, ವಿಜಯಪುರ, ಹಾಸನ, ಕೊಡಗಿನಲ್ಲಿ ಮುಂದಿನ 2 ದಿನ ಯೆಲ್ಲೋ ಅರ್ಲಟ್​ ನೀಡಲಾಗಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ ಎಂದ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
