ಸಿರಗುಪ್ಪ(ಬಳ್ಳಾರಿ):ಇತ್ತೀಚೆಗೆ ಕೃಷಿ ಹೊಂಡಗಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಆತ್ಮಹತ್ಯೆ, ನೀರಾಟ, ಕಾಲುಜಾರಿ, ನೀರು ಕುಡಿಯಲು ಹೋಗಿ… ಹೀಗೆ ಒಂದಲ್ಲ ಒಂದು ಕಾರಣಕ್ಕೆ ಕೃಷಿ ಹೊಂಡಕ್ಕೆ ಬಿದ್ದು ಮಕ್ಕಳು ಮತ್ತು ಪೋಷಕರು ಸಾವಿಗೀಡಾಗುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ನಿನ್ನೆ(ಬುಧವಾರ) ಬಳ್ಳಾರಿ ಜಿಲ್ಲೆಯಲ್ಲೂ ತಾಯಿ-ಮಗ ಕೃಷಿಹೊಂಡಕ್ಕೆ ಬಿದ್ದು ದುರಂತ ಅಂತ್ಯ ಕಂಡಿದ್ದಾರೆ.
ಸಿರಗುಪ್ಪ ತಾಲೂಕಿನ ಮುದೇನೂರು ಗ್ರಾಮದ ವೀರೇಶ್ ಎಂಬುವರ ಪತ್ನಿ ಪವಿತ್ರಾ ವೀರೇಶ (28) ಮತ್ತು ಮಗ ಕಾರ್ತಿಕ ವೀರೇಶ (8) ಮೃತರು. ವೀರೇಶ ಎರಡು ಎಕರೆ ಜಮೀನಿನಲ್ಲಿ ಹತ್ತಿ ಬಿತ್ತನೆ ಮಾಡಿದ್ದು, ಬೆಳೆಗಾಗಿ ಕೃಷಿ ಹೊಂಡವನ್ನೂ ನಿರ್ಮಿಸಿಕೊಂಡಿದ್ದಾರೆ. ಎಂದಿನಂತೆ ವೀರೇಶನ ಹೆಂಡತಿ ಪವಿತ್ರಾ ಮತ್ತು ಮಗ ಕಾರ್ತಿಕ ಬುಧವಾರ ಹೊಲಕ್ಕೆ ಹೋಗಿದ್ದರು.
ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋದ ಕಾರ್ತಿಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಹೋದ ತಾಯಿ ಪವಿತ್ರಾ ಕೂಡ ನೀರಲ್ಲಿ ಬಿದ್ದಿದ್ದಾರೆ. ಈಜು ಬಾರದ ಕಾರಣ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ. ಪಿಎಸ್​ಐ ರಂಗಯ್ಯ, ಸಹಾಯಕ ಕೃಷಿ ನಿರ್ದೇಶಕ ಜಮೀರ್​ ಅಹ್ಮದ್​, ಕಂದಾಯ ಅಧಿಕಾರಿ ಶೇಕ್ಷಾವಲಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಸಿಗೆಯಲ್ಲಿ ಮಕ್ಕಳ ಪ್ರಾಣಕ್ಕೆ ಕುತ್ತು ತಂದೀತು ಕೃಷಿ ಹೊಂಡ…!

ಊಟ ಇಲ್ಲ ಎಂದಿದ್ದಕ್ಕೆ ಸಿಬ್ಬಂದಿಯನ್ನು ಕೂಡಿಹಾಕಿ ಡಾಬಾಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು! ಕೊಪ್ಪಳದಲ್ಲಿ ಅಮಾನವೀಯ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
