ಮಂಗಳೂರು:ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ನವಜಾತ ಶಿಶು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲ್ಯ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ.
ವಿಟ್ಲ ಮೂಲದ 33 ವರ್ಷದ ಸವಿತಾ ಹೆರಿಗೆಗಾಗಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದರು. ಸ್ವಲ್ಪ ಹೊತ್ತಿನಲ್ಲೇ ಮಗು ಮೃತಪಟ್ಟಿದ್ದು, ಅಂದು ಸಂಜೆಯೇ ಸವಿತಾ ಕೂಡ ಮೃತಪಟ್ಟರು ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ.
ತಾಯಿ-ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ವೈದ್ಯರು ಹಾಗೂ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂಬಂಧಿಕರು ಒತ್ತಾಯಿಸಿದ್ದಾರೆ. ಮಂಗಳೂರು ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್​ ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.
ಹೊಟ್ಟೆಯಲ್ಲಿಯೇ ಮೃತಪಟ್ಟ ಮಗುವನ್ನು ಹೊರ ತೆಗೆಯಲು ವೈದ್ಯರು ತಡ ಮಾಡಿದ್ದರ ಪರಿಣಾಮ ತಾಯಿಯೂ ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಮೃತಳ ಕುಟುಂಬಸ್ಥರಿಂದ ಡಿ.ಎಚ್.ಒ. ಡಾ. ಕಿಶೋರ್ ಕುಮಾರ್ ಮಾಹಿತಿ ಪಡೆದಿದ್ದು, ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದ್ದಾರೆ.
ಸಾವಲ್ಲೂ ಸಾರ್ಥಕತೆ ಮೆರೆದ ಯುವಕ! ಅಂಗಾಂಗ ದಾನ ಮಾಡಿ ಐವರ ಪ್ರಾಣ ಉಳಿಸಿದ… ಇಂತಹ ಮಹಾನ್​ ದಾನಿಯ 2 ತಿಂಗಳ ಮಗು ಅನಾಥ

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty + 6 =
Remember me
