ಮೈಸೂರು:ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಪ್ರೇಮಿಗಳಿಬ್ಬರ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ಆದರೆ ಇಲ್ಲೊಬ್ಬ ಕಿರಾತಕಿ ತನ್ನ ಮಗಳ ಮದುವೆಯನ್ನೇ ನಿಲ್ಲಿಸಲು ಭಾವಿ ಅಳಿಯನ ತಂದೆಯನ್ನೇ ಕೊಂದು ಜೈಲು ಸೇರಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಗೌಡರಹುಂಡಿ ಗ್ರಾಮದ ಶಿವರಾಜಪ್ಪ ಕೊಲೆಯಾದ ದುರ್ದೈವಿ. ಶರತ್ ಕುಮಾರ್, ಮಧು ಹಾಗೂ ಮಲ್ಲಿಗಮ್ಮ ಬಂಧಿತ ಆರೋಪಿಗಳು. ಮಲ್ಲಿಗಮ್ಮಳ ಮಗಳು ಮತ್ತು ಕೊಲೆಯಾದ ಕೊಲೆಯಾದ ಶಿವರಾಜಪ್ಪನ ಮಗ ಪವನ್ ಕುಮಾರ್ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ನಿಶ್ಚಿತಾರ್ಥವೂ ನೆರವೇರಿತ್ತು.ಇದನ್ನೂ ಓದಿರಿಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಆದರೆ ಈ ಮದುವೆ ಮಲ್ಲಿಗಮ್ಮನಿಗೆ ಇಷ್ಟವಿರಲಿಲ್ಲ. ಶರತ್ ಕುಮಾರ್ ಜತೆ ಅಕ್ರಮ ಸಂಬಂಧ ಹೊಂದಿದ್ದ ಮಲ್ಲಿಗಮ್ಮ, ಈ ಮದುವೆಯನ್ನ ನಿಲ್ಲಿಸುವಂತೆ ಒತ್ತಡ ಹಾಕಿದ್ದಳು. ಪ್ರೇಯಸಿಯ ಮಾತು ಕೇಳಿದ ಶರತ್​ಕುಮಾರ್​, ಮಧು ಎಂಬಾತನ ಸಹಾಯ ಪಡೆದು ಮೇ 28ರಂದು ಶಿವರಾಜಪ್ಪನನ್ನು ಕೊಂದು ನಾಲೆಗೆ ಎಸೆದಿದ್ದರು. ಮೃತದೇಹ ಜೂ.2ರಂದು ರಾಮಪುರ ನಾಲೆಯಲ್ಲಿ ಪತ್ತೆಯಾಗಿತ್ತು.
ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪವನ್ ಕುಮಾರ್ ಹುಲ್ಲಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದ. ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಮಲ್ಲಿಗಮ್ಮಳ ಪ್ರಿಯಕರ ಶರತ್ ಕುಮಾರ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದ್ದು, ಮೂವರು ಆರೋಪಿಗಳನ್ನೂ ಪೊಲೀಸರು ಬುಧವಾರ ರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.(ದಿಗ್ವಿಜಯ ನ್ಯೂಸ್)
ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ರೋಹಿಣಿ ಸಿಂಧೂರಿ ಮನೆಯ ವಿದ್ಯುತ್​ ಬಿಲ್​ ತಿಂಗಳಿಗೆ 50 ಸಾವಿರ ರೂ., ಈಜುಕೊಳಕ್ಕೆ ಕುಡಿವ ನೀರು ಬಳಕೆ…

ಭಟ್ಕಳದಲ್ಲಿ 8 ವರ್ಷದಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ!

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
