ವಿಜಯಪುರ:ನಾಲ್ಕು ತಿಂಗಳ ಹಸುಗೂಸಿನೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಮಹಿಳೆಯೊಬ್ಬರು ಪರೀಕ್ಷೆ ಬರೆದಿದ್ದಾರೆ. ಇತ್ತ ಮಹಿಳೆಯು ಪರೀಕ್ಷೆ ಬರೆಯುತ್ತಿದ್ದರೆ, ಅತ್ತ ಆಶಾ ಕಾರ್ಯಕರ್ತೆಯು ಮಗುವನ್ನ ಎತ್ತಿಕೊಂಡು ಕಾಯುತ್ತಿದ್ದರು.
ಇಂತಹ ಅಪರೂಪದ ದೃಶ್ಯ ಮುದ್ದೇಬಿಹಾಳ ಪಟ್ಟಣದ ಅಭ್ಯುದಯ ಪರೀಕ್ಷಾ ಕೇಂದ್ರದಲ್ಲಿ ಕಂಡು ಬಂದಿದೆ. ತಸ್ಲೀಮಾ ಮಕಾನದಾರ್ ಅವರು ಮಗುವಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಪರೀಕ್ಷಾರ್ಥಿ. ಬಾಹ್ಯ ಪರೀಕ್ಷಾರ್ಥಿಯಾದ ಇವರು ಮಗುವನ್ನ ಆಶಾಕಾರ್ಯಕರ್ತೆ ಬಳಿ ಬಿಟ್ಟು ಪರೀಕ್ಷಾ ಕೊಠಡಿಗೆ ತೆರಳಿದರು. ಅತ್ತ ತಾಯಿ ಪರೀಕ್ಷೆ ಬರೆಯುತ್ತಿದ್ದರೆ, ಇತ್ತ ಆಶಾ ಕಾರ್ಯಕರ್ತೆ ಉಮಾ ಶಾರದಹಳ್ಳಿ ಅವರು ಮಗುವಿನ ಆರೈಕೆ ಮಾಡುತ್ತಿದ್ದರು. ಈ ದೃಶ್ಯ ವೈರಲ್​ ಆಗಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ: ವಿದ್ಯಾರ್ಥಿನಿ ಸಾವು

ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

ಪರೀಕ್ಷಾ ಕೇಂದ್ರದಲ್ಲೇ SSLC ವಿದ್ಯಾರ್ಥಿನಿ ಸಾವು: ಸಾವಿಗೂ ಮುನ್ನ ಅನುಶ್ರೀ ಕುಳಿತ್ತಿದ್ದ ಸ್ಥಳ ಬೇರೊಬ್ಬ ವಿದ್ಯಾರ್ಥಿಯದ್ದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
