ಮೈಸೂರು:ಎಲ್ಲ ರೀತಿಯ ಒತ್ತಡ, ಟೀಕಾಪ್ರಹಾರದ ನಡುವೆಯೂ ಶಾಲಾ-ಕಾಲೇಜುಗಳಳಲ್ಲಿ ಸಮವಸ್ತ್ರ ಕಡ್ಡಾಯಕ್ಕೆ ಸರ್ಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ. ಹಿಜಾಬ್​ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ. ಶಾಲಾ-ಕಾಲೇಜು ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು. ಎಲ್ಲರೂ ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ, ನೀವು ಹಿಜಾಬ್​ಗಾಗಿ ಬರುತ್ತಿದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಾಗೆ ಹೋಗಿ ಎಂದು ಸಂಸದ ಪ್ರತಾಪ್​ ಸಿಂಹ ಸೂಚಿಸಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಪ್ರತಾಪ್​ ಸಿಂಹ, ಇದು ಬ್ರಿಟಿಷರ ಭಾರತವಲ್ಲ. ಇದು ಭರತಖಂಡ. ಹಿಂದೂ ಧರ್ಮದ ಬುನಾದಿ ಮೇಲೆ ಇರುವ ದೇಶ ಇದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ‌ ಸಂಸ್ಕೃತಿಯ ಭಾಗ. ಇದನ್ನು ಯಾರೂ ಪ್ರಶ್ನಿಸುವಂತಿಲ್ಲ. ಇಸ್ಲಾಂ ಮತ್ತು ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಾಗೆ ಹೋಗಿ. ಮದರಸಾದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ, ಸರ್ಕಾರಿ ಶಾಲೆಗಳಲ್ಲಿ ಈ ರೀತಿಯ ಪ್ರತ್ಯೇಕತೆ ಸಾಧ್ಯವಿಲ್ಲ ಎಂದರು.
ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಏರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಪ್ರತಾಪ್ ಸಿಂಹ ಹೇಳಿದರು.
ಸಿದ್ದರಾಮಯ್ಯ ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ. ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜಪೇಟೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯ ‘ಸಿದ್ದರಹೀಮ್ ಅಯ್ಯಾ’ ಅಂತಾ ಬೇಕಾದರೆ ಹೆಸರು ಬದಲಾಯಿಸಿಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ತಿರುಗೇಟು ನೀಡಿದರು.
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಕಾಲೇಜು ಆಡಳಿತ ಮಂಡಳಿ

ಹಿಜಾಬ್​ ಬೇಕು ಅಂದ್ರೆ ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿ: ಪ್ರಮೋದ್ ಮುತಾಲಿಕ್​ ಆಕ್ರೋಶ

ಶಾಲಾ- ಕಾಲೇಜುಗಳಲ್ಲಿ ಹಿಜಾಬ್​ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + 12 =
Remember me
