ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈಸುಳಿಗಾಳಿ ಪರಿಣಾಮ ರಾಜ್ಯದ ಹಲವಡೆ ಸುರಿಯುತ್ತಿರುವ ಹಿಂಗಾರು ಪೂರ್ವ ಮಳೆ ಮುಂದಿನ ಒಂದು ವಾರ ಇನ್ನಷ್ಟು ಚುರುಕುಗೊಳ್ಳಲಿದೆ.
ಗುರುವಾರ ರಾತ್ರಿ ಮತ್ತು ಶುಕ್ರವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಹಿಂಗಾರು ಮಳೆ ಆರ್ಭಟಿಸಿದೆ. ತುಮಕೂರಿನ ಕುಣಿಗಲ್, ಚಿಕ್ಕಮಗಳೂರಿನ ಕಳಸದಲ್ಲಿ ತಲಾ 9, ಚಾಮರಾಜನಗರ ಮತ್ತು ಬೆಂಗಳೂರಿನ ಹೆಸರಘಟ್ಟದಲ್ಲಿ ತಲಾ 8 ಸೆಂ.ಮೀ., ಹಾಸನದ ಬೇಲೂರಿನಲ್ಲಿ 7 ಸೆಂಮೀ ಮಳೆ ಬಿದ್ದಿದೆ.
ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಚಾಮರಾಜನಗರದಲ್ಲಿ ಅ.15ರಿಂದ ಮುಂದಿನ 4 ದಿನ, ಚಿತ್ರದುರ್ಗ, ಬಳ್ಳಾರಿಯಲ್ಲಿ ಅ.16ರಂದು ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅ.18ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಉಳಿದೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಬದಲಾವಣೆಯಿಂದ ಅ.21ರವರೆಗೆ ಮುಂಗಾರು ಮಾನ್ಸೂನ್ ಮುಂದುವರಿಯಲಿದೆ. ಬಳಿಕ, ಶುರುವಾಗುವ ಹಿಂಗಾರು ಪೂರ್ವ ಡಿ.30ರವರೆಗೆ ಬೀಳಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದರು.
ಹಿಮಾಚಲ ಪ್ರದೇಶ​ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟ

ಜ್ಞಾನವಾಪಿಯಲ್ಲಿ ಶಿವಲಿಂಗ ಪತ್ತೆ: ವೈಜ್ಞಾನಿಕ ಅಧ್ಯಯನ ನಡೆಸದಂತೆ ವಾರಣಾಸಿ ಕೋರ್ಟ್​ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
