ಬೆಂಗಳೂರು:ಹಿರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿಯೊಂದು ಸೋಮವಾರ ಮಧ್ಯಾಹ್ನ ಕೇಳಿಬಂದಿತ್ತು. ಆದರೆ, ಇದೊಂದು ವದಂತಿ, ಹಂಸಲೇಖ ಅವರು ಆರೋಗ್ಯವಾಗಿದ್ದಾರೆ ಎಂದು ಹಂಸಲೇಖ ಅವರ ಪುತ್ರಿ ತೇಜಸ್ವಿನಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ತೇಜಸ್ವಿನಿ, “ನಮ್ಮ ತಂದೆಯವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಈ ಸುಳ್ಳು ಸುದ್ದಿ ಕೇಳಿ ಅಭಿಮಾನಿಗಳು ಆತಂಕ ಪಡಬಾರದು. ನನ್ನ ತಂದೆ ಚೆನ್ನಾಗಿಯೇ ಇದ್ದಾರೆ. ದಯವಿಟ್ಟು ವದಂತಿ ಹರಡದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಬೆಂಗಳೂರಿನ ರಾಜಾಜಿನಗರದ ಫಸ್ಟ್ ಬ್ಲಾಕ್‌ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ ಎಂಬ ಸೋಮವಾರ ಸುದ್ದಿ ಹರಿದಾಡಿತ್ತು.
ವ್ಯಾಜ್ಯದಲ್ಲಿ ಸೋತಿದ್ದಕ್ಕೆ ವಕೀಲರ ವಿರುದ್ಧ ಕೇಸ್​ ದಾಖಲಿಸಿದ್ದ ವಿವಿಗೆ ಹೈಕೋರ್ಟ್​ ತರಾಟೆ! ವಕೀಲರ ವಿರುದ್ಧದ ಪ್ರಕರಣ ರದ್ದು

ಕುಂಬಳೆ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
