ಮೈಸೂರು:ತನ್ನ ತಾಯಿ ಸತ್ತ ದಿದ ಈ ಬದುಕೇ ಸಾಕೆನಿಸಿ ವಿಷ ಕುಡಿದಿದ್ದ ಯುವಕ ಬದುಕಿದ. ಇದಾದ ಕೆಲ ವರ್ಷದಲ್ಲಿ ತಂದೆ ಮೃತಪಟ್ಟರು. ಆ ದಿನವೂ ಸಾಯಲೇ ಬೇಕೆಂದು ನಿರ್ಧರಿಸಿ ಚಲಿಸುತ್ತಿದ್ದ ರೈಲಿಂದ ಕೆಳಗೆ ಜಿಗಿದಿದ್ದ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದ. ಎರಡು ಬಾರಿಯೂ ಸಾವಿನ ಮನೆಯ ಕದತಟ್ಟಿ ವಾಪಸ್​ ಬಂದಿದ್ದವ ನಿನ್ನೆ(ಗುರವಾರ) ದುರಂತ ಅಂತ್ಯ ಕಂಡಿದ್ದಾನೆ.
ಇಂತಹ ಘಟನೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಸಂಭವಿಸಿದೆ. ಎಸ್.ಕಾರ್ತಿಕ್ (30) ಮೃತ ದುರ್ದೈವಿ. ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್​ ಎನ್.ಆರ್.ಮೊಹಲ್ಲಾದಲ್ಲಿ ವಾಸವಿದ್ದ.
ಕಾರ್ತಿಕ್​ ತಾಯಿ ಡಾ.ಪಾರ್ವತಿ ಕೆಲ ವರ್ಷಗಳ ಹಿಂದೆಷ್ಟೇ ಸಾವನ್ನಪ್ಪಿದ್ದರು. ನಂತರ ತಂದೆ ಶಿವಲಿಂಗಯ್ಯ ಕೂಡ ಮೃತಪಟ್ಟಿದ್ದರು. ಚಿಕ್ಕಮ್ಮನ ಆಸರೆಯಲ್ಲಿದ್ದ ಕಾರ್ತಿಕ್, ಇತ್ತೀಚಿಗೆ ಎನ್.ಆರ್.ಮೊಹಲ್ಲಾದಲ್ಲಿ ಬಾಡಿಗೆ ರೂಂ​ ಮಾಡಿಕೊಂಡು ವಾಸವಾಗಿದ್ದ.
ತಾಯಿ ಸಾವನ್ನಪ್ಪಿದ ದಿನವೇ ಕಾರ್ತಿಕ್ ವಿಷ ಸೇವಿಸಿದ್ದ. ಅಷ್ಟೇ ಅಲ್ಲನ ತಂದೆ ಸತ್ ದಿನ ರೈಲಿನಿಂದ ಕೆಳಗೆ ಜಿಗಿದಿದ್ದ‌. ಅದೃಷ್ಟವಶಾತ್ ಈ ಎರಡು ಬಾರಿಯೂ ಅಪಾಯದಿಂದ ಪಾರಾಗಿದ್ದ. ಪೋಷಕರ ಅಗಲಿಕೆಯಿಂದ ತೀವ್ರವಾಗಿ ಮನನೊಂದ ಕಾರ್ತಿಕ್​, ಮೂರನೇ ಬಾರಿಗೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಹುಟ್ಟು ಹಬ್ಬದ ದಿನವೇ ಮೃತಪಟ್ಟಿದ್ದಾನೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ತಡರಾತ್ರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ! ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

ಗಂಡನಿದ್ದರೂ ಪರಪುರುಷನ ಜತೆ ಮಹಿಳೆಯ ಕಾಮದಾಟ! ಬೇಡ ಬೇಡ ಎಂದವನ ಉಸಿರನ್ನೇ ನಿಲ್ಲಿಸಿದ್ಳು

https://www.vijayavani.net/a-illicit-relationship-poisoning-by-lovers/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
