ಮೈಸೂರು:ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗಜಪಡೆ ಹಾಗೂ ಅಶ್ವದಳಕ್ಕೆ ಭಾರೀ ಸದ್ದಿನ ಪರಿಚಯ ಮಾಡಿಸುವ ಸಲುವಾಗಿ ಸೋಮವಾರ ಮೊದಲ ಸುತ್ತಿನ ಫಿರಂಗಿ ತಾಲೀಮು ನಡೆಸಲಾಯಿತು. ಈ ವೇಳೆ ಫಿರಂಗಿಯಿಂದ ಹೊಮ್ಮಿದ ಶಬ್ಧಕ್ಕೆ ಹೊಸ ಆನೆಗಳು ಬೆದರಿದ ಪ್ರಸಂಗ ನಡೆಯಿತು.

ಜಂಬೂಸವಾರಿಯಂದು ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ವೇಳೆ 21 ಸುತ್ತು ಕುಶಾಲತೋಪು ಸಿಡಿಸುವ ಸಂಪ್ರದಾಯವಿದ್ದು, ಈ ವೇಳೆ ಭಾರೀ ಸದ್ದಿಗೆ ಆನೆಗಳು ಹಾಗೂ ಅಶ್ವದಳ ಬೆದರದಂತೆ ಅಭ್ಯಾಸ ಮಾಡಿಸುವ ಸಲುವಾಗಿ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿಯ ಪಾರ್ಕಿಂಗ್ ಆವರಣದಲ್ಲಿ ಮೊದಲ ಹಂತದ ಫಿರಂಗಿ ತಾಲೀಮು ನಡೆಸಲಾಯಿತು. ಫಿರಂಗಿ ದಳದ 30 ಮಂದಿ ಸಿಎಆರ್ ಪೊಲೀಸರು 7 ಫಿರಂಗಿಗಳ ಮೂಲಕ ಮೂರು ಸುತ್ತಿನಲ್ಲಿ ಒಟ್ಟು 21 ಸಿಡಿಮದ್ದನ್ನು ಸಿಡಿಸಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಭಾರೀ ಶಬ್ಧದ ತಾಲೀಮು ನೀಡಿದರು.

ತಾಲೀಮಿನಲ್ಲಿ ಅಂಬಾರಿ ಆನೆ ಅಭಿಮನ್ಯು, ಕುಮ್ಕಿ ಆನೆಗಳಾದ ಕಾವೇರಿ, ಚೈತ್ರ, ಲಕ್ಷ್ಮೀ, ಗೋಪಾಲಸ್ವಾಮಿ, ಧನಂಜಯ, ಮಹೇಂದ್ರ, ಭೀಮ, ಅರ್ಜುನ, ಪಾರ್ಥಸಾರಥಿ, ಸುಗ್ರೀವ, ಶ್ರೀರಾಮ, ವಿಜಯ, ಗೋಪಿ  ಸೇರಿದಂತೆ ಅಶ್ವಾರೋಹಿ ದಳದ 40ಕ್ಕೂ ಹೆಚ್ಚು ಕುದುರೆಗಳು ಭಾಗವಹಿಸಿದ್ದವು.

ಬೆದರಿದ ಸುಗ್ರೀವ, ಪಾರ್ಥಸಾರಥಿ:ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಭಾಗವಹಿಸಿರುವ ಸುಗ್ರೀವ, ಪಾರ್ಥಸಾರಥಿ, ಭೀಮ ಆನೆಗಳು‌ ಸಿಡಿಮದ್ದಿನ ಭಾರೀ ಶಬ್ಧಕ್ಕೆ ಬೆದರಿದವು. ಮುಂಜಾಗ್ರತಾ ಕ್ರಮವಾಗಿ ಈ ಆನೆಗಳ ಕಾಲಿಗೆ ಸರಪಳಿ ಕಟ್ಟಿ ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು. ಮೊದಲ ಸುತ್ತಿನ ಸಿಡಿಮದ್ದು ಸಿಡಿಸುತ್ತಿದ್ದಂತೆ, ಬೆದರಿ ಹಿಂದೆ-ಮುಂದೆ ಚಲಿಸಲಾರಂಭಿಸಿದವು. ಈ ವೇಳೆ ಮಾವುತರು ಆನೆಗಳನ್ನು ನಿಯಂತ್ರಿಸಿದರು. ಕಳೆದ ಎರಡು ವರ್ಷಗಳಿಂದ ಭಾಗವಹಿಸುತ್ತಿರುವ ಧನಂಜಯ ಈ ಬಾರಿಯೂ ಭಾರೀ ಶಬ್ಧಕ್ಕೆ ಬೆದರಿದ.
ರೋಗಿಯ ಜೀವ ಉಳಿಸಲು ಬೆಂಗಳೂರಿನ ಟ್ರಾಫಿಕ್​ನಲ್ಲಿ 3 ಕಿ.ಮೀ. ಓಡಿದ ಡಾಕ್ಟರ್​! ವಿಡಿಯೋ ವೈರಲ್​, ಎಲ್ಲೆಡೆ ಮೆಚ್ಚುಗೆ

ಪುಸ್ತಕದೊಳಗೇ ಹಾವು! ಮನೆಯ ಟೇಬಲ್​ ಮೇಲಿದ್ದ ಪುಸ್ತಕದಲ್ಲಿ ಬೆಚ್ಚಗೆ ಮಲಗಿದ್ದ ಹಾವು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
