ಮೈಸೂರು:ನಟ ಡಾ. ಪುನೀತ್ ರಾಜ್‌ಕುಮಾರ್‌ಗೆ ದಸರೆಯಲ್ಲಿ ವಿಶೇಷ ನಮನ ಸಲ್ಲಿಸಲಾಗುತ್ತಿದೆ. ಚಲನಚಿತ್ರೋತ್ಸವದಲ್ಲೂ ‘ಅಪ್ಪು ದಿನ’ ಆಚರಿಸಲಾಗುತ್ತಿದೆ. ಅವರ ಆರು ಸಿನಿಮಾಗಳನ್ನು ತೋರಿಸಲಾಗುತ್ತಿದೆ. ದೀಪಾಲಂಕಾರದಲ್ಲಿ ಪವರ್‌ಸ್ಟಾರ್‌ಗೆ ಬೆಳಕಿನ ರೂಪಕ ನೀಡಿದ್ದರೆ, ಫಲಪುಷ್ಪ ಪ್ರದರ್ಶನದಲ್ಲೂ ‘ಯುವರತ್ನ’ನಿಗೆ ಹೂವಿನ ಸಿಂಗಾರ ಮಾಡಲಾಗಿದೆ. ದಸರಾ ವಸ್ತುಪ್ರದರ್ಶನದಲ್ಲೂ ಪುನೀತ್‌ಗೆ ಮರಳುಶಿಲ್ಪದ ರೂಪ ನೀಡಲಾಗಿದೆ. ಇನ್ನು ಯುವ ದಸರಾದಲ್ಲಿ ಗಾಯಕರಾದ ಗುರುಕಿರಣ್, ವಿಜಯಪ್ರಕಾಶ್, ಬಾಲಿವುಡ್‌ನ ಕುನಾಲ್ ಗಾಂಜಾವಾಲ್ ಅವರು ‘ಅಂಜನಿಪುತ್ರ’ನಿಗೆ ಸಂಗೀತ ನಮನ ಅರ್ಪಿಸಲಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಉತ್ಸವ ಪ್ರಯುಕ್ತ ಸೆ.27ರಿಂದ ಅ.3 ರವರೆಗೆ ಹಮ್ಮಿಕೊಂಡಿರುವ ದಸರಾ ಚಲನಚಿತ್ರೋತ್ಸವಕ್ಕೆ ಸೋಮವಾರ ವರ್ಣ ರಂಜಿತ ಚಾಲನೆ‌ ದೊರೆಯಿತು. ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ವೇದಿಕೆಯ ಎಡ ಮತ್ತು ಬಲ ಬದಿಯಲ್ಲಿ ಡಾ.ಪುನೀತ್ ರಾಜ್​ಕುಮಾರ್ ಹಾಗೂ ಸಂಚಾರಿ ವಿಜಯ್ ಅವರ ಭಾವಚಿತ್ರ ‌ಇಟ್ಟು ವಿಶೇಷ ಗೌರವ ಸಲ್ಲಿಸಲಾಯಿತು. ಈ ಬಾರಿ ನಗರದ ಐನಾಕ್ಸ್ ಹಾಗೂ ಡಿಆರ್ ಸಿ ಮಲ್ಟಿಪ್ಲೆಕ್ಸ್ ನಲ್ಲಿ ಕನ್ನಡ, ಪನೋರಮಾ ಹಾಗೂ ಅಂತಾರಾಷ್ಟ್ರೀಯ ಚಿತ್ರಗಳು ಪ್ರದರ್ಶನಗೊಳ್ಳಲಿದೆ.

ಅಪ್ಪು ದಿನ:ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಸಿನಿಮಾ ಪ್ರದರ್ಶನಕ್ಕೆ ಒಂದು ದಿನವನ್ನು ಮೀಸಲಿಡಲಾಗಿದೆ. ಸೆ.28ರಂದು ಅಪ್ಪು ದಿನ ಹೆಸರಿನಲ್ಲಿ ಅಪ್ಪು ಅಭಿನಯದ ಬೆಟ್ಟದ ಹೂವು, ರಾಜಕುಮಾರ, ರಣವಿಕ್ರಮ, ಯುವರತ್ನ ಚಿತ್ರಗಳು ಪ್ರದರ್ಶನಗೊಳ್ಳಲಿದೆ.
ನಟಿಯರಾದ ಅನುಪ್ರಭಾಕರ್, ಅಮೃತ ಅಯ್ಯಂಗಾರ್, ಕಾವ್ಯ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಮೇಯರ್ ಶಿವಕುಮಾರ್, ಉಪ ಮೇಯರ್ ರೂಪಾ, ಶಾಸಕ ಎಲ್. ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ ಡಿ.ಎಸ್. ಶ್ರೀವತ್ಸ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮೈಲ್ಯಾಕ್ ಅಧ್ಯಕ್ಷ ಕೌಟಿಲ್ಯ ರಘು, ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವು ಉಪಸ್ಥಿತರಿದ್ದರು.
ಖುಷಿ ಕ್ಷಣ ಕಳೆಯಲು ಬಂದ ಮೂವರು ಬಿಇ ವಿದ್ಯಾರ್ಥಿಗಳು ದುರಂತ ಅಂತ್ಯ! ಉಡುಪಿಯಲ್ಲಿ ದುರ್ಘಟನೆ

ದಸರಾಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡ ಮೈಸೂರು: ಸಾಂಸ್ಕೃತಿಕ ಸಿರಿ- ಧಾರ್ಮಿಕ ಐಸಿರಿಯ ಸಮ್ಮಿಲನ… ಕಳೆಗಟ್ಟಲಿದೆ ನವೋಲ್ಲಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − five =
Remember me
