ಮೈಸೂರು:ಮಹಾಶಿವರಾತ್ರಿ ಹಬ್ಬದ ಸಡಗರ-ಸಂಭ್ರಮದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಮಿಂದೇಳುತ್ತಿದೆ. ಮನೆ ಮನಗಳಲ್ಲಿ ಮತ್ತು ಮಠ-ಮಂದಿರದಲ್ಲಿ ಶಿವನಾಮ ಸ್ಮರಣೆ, ಶಿವನಾಮ ಜಪ ಶುರುವಾಗಿದೆ. ಶಿವರಾತ್ರಿಯ ಪ್ರಮುಖ ಆಕರ್ಷಣೆಯಾದ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಸ್ಥಾನದಲ್ಲೂ ಭರದ ಸಿದ್ಧತೆಗಳು ಜರುಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಖಜಾನೆಯಲ್ಲಿದ್ದ ಚಿನ್ನದ ಕೊಳಗ (ಮುಖವಾಡ)ವನ್ನು ದೇವಾಲಯಕ್ಕೆ ಹಸ್ತಾಂತರಿಸಲಾಗಿದೆ. ದೇವರ ಕೊಳಗವನ್ನು ದೇವಾಲಯದ ಅರ್ಚಕರಿಗೆ ನೀಡಲಾಗಿದೆ. ವರ್ಷಕ್ಕೊಮ್ಮೆ ಮಾತ್ರ ಶಿವಲಿಂಗಕ್ಕೆ ಧಾರಣೆಯಾಗುವ 11 ಕೆಜಿ ಅಪರಂಜಿ ಚಿನ್ನದ ಮುಖವಾಡ ನೋಡಲು ಭಕ್ತರ ದಂಡೇ ಹರಿದು ಬರುತ್ತಿದೆ.
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್​ ಜನಿಸಿದ ಸಂದರ್ಭದಲ್ಲಿ ಜಯಚಾಮರಾಜ ಒಡೆಯರ್​ ಅವರು ಅರಮನೆ ಆವರಣದಲ್ಲಿರುವ ತ್ರಿನೇತ್ರಸ್ವಾಮಿ ದೇವಾಲಯ, ನಂಜನಗೂಡಿನ ನಂಜುಂಡೇಶ್ವರ ದೇವಾಲಯ ಹಾಗೂ ಮಲೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಚಿನ್ನದ ಕೊಳಗ ನೀಡಿದ್ದರು. ನಂಜನಗೂಡು ಹಾಗೂ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ನಿತ್ಯ ಚಿನ್ನದ ಕೊಳಗಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಭದ್ರತೆ ದೃಷ್ಟಿಯಿಂದ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದ ಕೊಳಗವನ್ನು ಜಿಲ್ಲಾ ಖಜಾನೆಯಲ್ಲಿ 1982 ರಿಂದೀಚೆಗೆ ಇಡಲಾಗುತ್ತಿದ್ದು, ವರ್ಷಕ್ಕೊಮ್ಮೆ (ಶಿವರಾತ್ರಿ ಮುನ್ನಾದಿನ) ಮಾತ್ರ ಹೊರತೆಗೆದು ಶಿವರಾತ್ರಿಯಂದು ಪೂಜೆ ಸಂದರ್ಭದಲ್ಲಿ ಬಳಸುವ ಸಂಪ್ರದಾಯವಿದೆ.
ಕೊಳಗವನ್ನು ದೇವಾಲಯಕ್ಕೆ ತಂದ ಬಳಿಕ ಅದಕ್ಕೆ ಪೂಜೆ ಸಲ್ಲಿಸಿ ಕೊಠಡಿಯೊಂದರಲ್ಲಿ ಇಡಲಾಗಿದೆ. ಮಂಗಳವಾರ ಬೆಳಗಿನ ಜಾವ 4.30ರಿಂದ ದೇವಾಲಯದಲ್ಲಿ ಅರ್ಚನೆ, ಅಭಿಷೇಕ ನಡೆದಿದ್ದು, ತ್ರಿನೇಶ್ವರಸ್ವಾಮಿ ದೇವಾಲಯದ ಮೂಲದೇವರಿಗೆ ಚಿನ್ನದ ಕೊಳಗ ಧಾರಣೆ ಮಾಡಲಾಗಿದೆ. ಭಕ್ತಾದಿಗಳ ಅನುಕೂಲಕ್ಕಾಗಿ ಬೆಳಗ್ಗೆ 6ರಿಂದ ರಾತ್ರಿ 12 ಗಂಟೆವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
–Basavaraj Bommai (@bsbommai)1 Mar 2022

–Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan)1 Mar 2022

–BJP KARNATAKA (@BJP4Karnataka)1 Mar 2022

–Araga Jnanendra (@aragajnanendra)1 Mar 2022

–ಕೆ ಗೋಪಾಲಯ್ಯ (@kgopaliahbjp)1 Mar 2022

–Dr. Murugesh R Nirani (@murugesh_nirani)1 Mar 2022

ಶಿವಮೊಗ್ಗದ ಹರ್ಷನ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ನೆರವು

ವಿಶ್ವನಾಥನ ಸನ್ನಿಧಿಯಲ್ಲಿ ವಿಶ್ವಾರಾಧ್ಯರ ಜಾತ್ರೆ: ಕಾಶಿ ಪೀಠದಲ್ಲಿ ಶಿವರಾತ್ರಿ ಅಂಗವಾಗಿ ವಿದ್ವತ್ ಸಭೆ, ಶಾಸ್ತ್ರಾರ್ಥ ಚರ್ಚೆ

ಟೂತ್​ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು! ದಕ್ಷಿಣ ಕನ್ನಡ ಜಿಲ್ಲೇಲಿ ದುರಂತ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − 16 =
Remember me
