ಮೈಸೂರು:ನಾಡಹಬ್ಬ ಮೈಸೂರು ದಸರಾ ಉತ್ಸವದ ಮುನ್ನುಡಿಯಂತಿರುವ ಗಜಪಯಣಕ್ಕೆ ಹುಣಸೂರು ತಾಲೂಕಿನ ನಾಗಾಪುರದಲ್ಲಿ ಭಾನುವಾರ ಸಂಭ್ರಮದ ಚಾಲನೆ ದೊರೆಯಿತು.
ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ಸಫಾರಿ ಕೌಂಟರ್ ಮುಂಭಾಗದಲ್ಲಿ ಅರಣ್ಯ ಸಚಿವ ಉಮೇಶ್ ವಿ.ಕತ್ತಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಗಣ್ಯರು ಕನ್ಯ ಲಗ್ನದ ಶುಭ ಮುಹೂರ್ತದಲ್ಲಿ ದೀಪ ಬೆಳಗಿ ನಂತರ ಆನೆಗಳಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಗಜಪಯಣಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಗಜಪಯಣದ ಅಂಗವಾಗಿ ಆನೆಗಳನ್ನು ವಿಶೇಷವಾಗಿ ಶೃಂಗರಿಸಲಾಗಿತ್ತು. ಗಜಪಯಣ ವೀಕ್ಷಿಸಲು ನೂರಾರು ಸಂಖ್ಯೆಯಲ್ಲಿ ಆದಿವಾಸಿಗಳು, ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು, ಅಧಿಕಾರಿಗಳು, ಬೇರೆ ಬೇರೆ ಇಲಾಖೆ ನೌಕರರು ಕೂಡ ಆಗಮಿಸಿದ್ದರು. ಹೀಗಾಗಿ ನಾಗರ ಹೊಳೆಯ ವೀರನಹೊಸಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು.

ಕಳೆದ 25 ವರ್ಷಗಳಿಂದ ದಸರಾ ಉತ್ಸವದ ಆನೆಗಳಿಗೆ ಪೂಜೆ ಸಲ್ಲಿಸುತ್ತಿರುವ ಅರ್ಚಕ ಮೈಸೂರಿನ ಪ್ರಹ್ಲಾದ್ ದೀಕ್ಷಿತ್, ಆನೆಗಳಿಗೆ ಪೂಜೆ ಸಲ್ಲಿಸಿದರು. ಬೆಳಗ್ಗೆ 9 ಗಂಟೆಗೆ ಆನೆಗಳನ್ನು ಸಾಲಾಗಿ ನಿಲ್ಲಿಸಲಾಯಿತು. ಬಳಿಕ ಆನೆಗಳ ಪಾದ ತೊಳೆದು, ಆನೆಗಳ ಮೇಲಿನ ದೃಷ್ಟಿದೋಷ ತೆಗೆಯಲಾಯಿತು. ನಂತರ ಆನೆಗಳ ಪಾದದ ಬಳಿ ಕುಂಕುಮ- ಹರಿಶಿಣ, ಗರಿಕೆ, ಬೆಲ್ಲ, ಕಬ್ಬು, ಮೋದಕ, ಕಡುಬು, ಪಂಚಕಜ್ಜಾಯ, ಎಲೆ, ಅಡಿಕೆಗಳನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಪೂಜೆಯ ನಂತರ ಸಚಿವರು, ಶಾಸಕರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಪುಷ್ಪಾರ್ಚನೆ ನೆರವೇರಿಸುವುದರೊಂದಿಗೆ ಗಜಪಯಣಕ್ಕೆ ಚಾಲನೆ ದೊರೆಯಿತು. ಈ ಸಂದರ್ಭ ಆನೆಗಳಿಗೆ ಹಣ್ಣು- ಕಬ್ಬು ನೀಡಲಾಯಿತು.
ಮಹಾಮಾರಿ ಕರೊನಾ ಹಿನ್ನೆಲೆ ಕಳೆದ ಎರಡು ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಯೋಜಿಸಿದ್ದ ಕಾರಣ ಸರಳವಾಗಿ ಗಜಪಯಣ ಆಯೋಜಿಸಲಾಗಿತ್ತು. ಆದರೆ, ಈ ಬಾರಿ ಅದ್ಧೂರಿಯಾಗಿ ನಡೆಯಿತು. ಎರಡು ವರ್ಷ ನಾಗರಹೊಳೆಯಲ್ಲಿ ಕಳೆದು ಹೋಗಿದ್ದ ಸಂಭ್ರಮ-ಸಡಗರ ಮತ್ತೆ ಮನೆ ಮಾಡಿತ್ತು.

ಎಲ್ಲ ಪೂಜೆ ಬಳಿಕ ಗಜಪಡೆ 700 ಮೀಟರ್ ದೂರ ಕಾಲ್ನಡಿಗೆ ಮೂಲಕ ಬಂದವು. ಈ ವೇಳೆ ಸುತ್ತ-ಮುತ್ತಲಿನ ಗ್ರಾಮಗಳ ಮತ್ತು ಆಡಿಗಳ ನೂರಾರು ಮಹಿಳೆ ಗಜಪಡೆಗೆ ಪೂರ್ಣಕುಂಭ ಸ್ವಾಗತ ಕೋರಿದರು. ಚಂಡೆ, ವೀರಗಾಸೆ ಸೇರಿ ಇತರ ಕಲಾವಿದರು ಸಾಥ್ ನೀಡಿದರು.

ಬಳಿಕ ಕ್ಯಾಪ್ಟನ್ ಅಭಿಮನ್ಯು, ಕುಮ್ಕಿ ಆನೆಗಳಾದ ಕಾವೇರಿ, ಚೈತ್ರ, ಲಕ್ಷ್ಮೀ, ಇತರ ಆನೆಗಳಾದ ಗೋಪಾಲಸ್ವಾಮಿ, ಧನಂಜಯ, ಮಹೇಂದ್ರ, ಅರ್ಜುನ, ಭೀಮ ಮೈಸೂರಿನತ್ತ ಪಯಣ ಬೆಳೆಸಿದರು. ಸಂಜೆ ಮೈಸೂರಿನ ಅಶೋಕಪುರಂನ ಅರಣ್ಯ ಭವನಕ್ಕೆ ಆಗಮಿಸಿ ವಾಸ್ತವ್ಯ ಹೂಡಿಲಿವೆ.
ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಮಂಜೇಗೌಡ, ಮೃಗಾಲಯ ಪ್ರಾಧಿಕಾರದ ಶಿವಕುಮಾರ್, ಮೇಯರ್ ಸುನಂದಾ ಪಾಲನೇತ್ರ, ಜಿಲ್ಲಾಧಿಕಾರಿ ಬಗಾದಿ ಗೌತಮ್, ಪೊಲೀಸ್ ವರಷ್ಠಾಧಿಕಾರಿ ಚೇತನ್, ಡಿಸಿಎಫ್ ಗಳಾದ ಕರಿಕಾಳನ್, ಕಮಲಾ ಕರಿಕಾಳನ್ ಇತರರಿದ್ದರು.
ಶೂ ಧರಿಸಿ ಪೂಜೆ ಸಲ್ಲಿಸಿದ ಉಮೇಶ್​ ಕತ್ತಿ! ಮೈಸೂರು ದಸರಾ ಗಜಪಯಣಕ್ಕೆ ಚಾಲನೆ ನೀಡುವಾಗ ಎಡವಟ್ಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eighteen =
Remember me
