ಮೈಸೂರು:ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗ ನೋಡುವ ಭಾಗ್ಯ ಸಿಕ್ಕಿದ್ದು 15 ಸೆಕೆಂಡ್ ಮಾತ್ರ!
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು. ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.
ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.
ತುಮಕೂರಲ್ಲಿ ಹಾಡಹಗಲೇ ಕುಡಿದ ಮತ್ತಿನಲ್ಲಿ ನಾಗರಹಾವನ್ನ ಕೈಗೆ ಸುತ್ತಿಕೊಂಡು ಓಡಾಡಿದ ಯುವಕ! ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
